More

    ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ. ರೋಸಯ್ಯ ನಿಧನ

    ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಮಾಜಿ ರಾಜ್ಯಪಾಲ ಕೆ. ರೋಸಯ್ಯ ಅವರು ಇಂದು ಹೈದರಾಬಾದ್​ನಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

    ಯಾವುದಕ್ಕೂ ಸ್ಪಂದಿಸದ ಸ್ಥಿತಿಯಲ್ಲಿದ್ದ ರೋಸಯ್ಯ ಅವರನ್ನು ಇಂದು ಬೆಳಗ್ಗೆ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬೆಳಗ್ಗೆ 8.20ರ ಸುಮಾರಿಗೆ ಅವರು ಕೊನೆಯುಸಿರೆಳೆದರು.

    ಇದನ್ನೂ ಓದಿ: ‘ಮೊನ್ನೆ ತಾನೇ ನಾನು ಅವರು ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ವಿ..’: ಶಿವರಾಂ ಅಂತಿಮ ದರ್ಶನ ಪಡೆದ ಸಿಎಂ ಮತ್ತೇನೆಂದರು?

    ತಮಿಳುನಾಡು ರಾಜ್ಯಪಾಲರಾಗಿದ್ದ ರೋಸಯ್ಯ, ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯಪಾಲರಾಗಿಯೂ ಕೆಲ ತಿಂಗಳ ಕಾಲ ಜವಾಬ್ದಾರಿ ನಿರ್ವಹಿಸಿದ್ದರು.ರೋಸಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ತೆಲಂಗಾಣ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ.

    ಇದನ್ನೂ ಓದಿ: ನಾಳೆ ನಟ ಶಿವರಾಂ ಅಂತಿಮ ದರ್ಶನಕ್ಕೆ ವ್ಯವಸ್ಥೆ; ಎಲ್ಲಿ, ಎಷ್ಟು ಸಮಯ.. ಇಲ್ಲಿದೆ ಮಾಹಿತಿ..

    ನಾವಿಬ್ಬರೂ ಮುಖ್ಯಮಂತ್ರಿ ಆಗಿದ್ದಾಗ ಪರಸ್ಪರ ಸಂಪರ್ಕಿಸಿದ್ದೆವು. ಬಳಿಕ ಅವರು ರಾಜ್ಯಪಾಲರಾದರು. ಸಾರ್ವಜನಿಕ ಸೇವೆಗೆ ಅವರ ಕೊಡುಗೆ ಸ್ಮರಣೀಯವಾದುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

    ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!

    ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವೈದ್ಯರ ಸಮ್ಮೇಳನದಲ್ಲೇ ಹರಡಿತು ಒಮಿಕ್ರಾನ್!: ಎಲ್ಲವೂ ಗುಟ್ಟುಗುಟ್ಟು.. ಮಾಡಲಾಯಿತೇ ನಿರ್ಲಕ್ಷ್ಯ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts