ಆಂಧ್ರ ಪ್ರದೇಶ: ಮನೆ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

hand
Published on

ಅಮರಾವತಿ (ಆಂಧ್ರ ಪ್ರದೇಶ): ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಚಿನ್ನವಂಗ್ಲಿ ಗ್ರಾಮದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಮನೆಯ ಮಣ್ಣಿನ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಗುರು ಶೇಖರ ರೆಡ್ಡಿ (42), ಪತ್ನಿ ದಸ್ತಗಿರಮ್ಮ ಮತ್ತು ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಲ್ಲಗಡ್ಡ ಉಪವಿಭಾಗದ ಪೊಲೀಸ್ ಅಧಿಕಾರಿ ಶೇಕ್ ಷರೀಫುದ್ದೀನ್ ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಈ ಘಟನೆ ನಡೆದಿದೆ. ಮಧ್ಯರಾತ್ರಿ ಚಾವಣಿ ಕುಸಿದ ಪರಿಣಾಮ ಭಾರೀ ಸದ್ದು ಕೇಳಿದ ಮನೆಯ ಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ನೋಡಿದ್ದಾರೆ. ಅಷ್ಟೊತ್ತಿಗಾಗಲೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net