More

    ಆಂಧ್ರದಲ್ಲಿ ರೈಲು ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ – ಮೃತರ ಕುಟುಂಬಗಳಿಗೆ 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಘೋರ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 14ಕ್ಕೆ ಏರಿದೆ. ದುರ್ಘಟನೆಯಲ್ಲಿ 54ಮಂದಿ ಗಾಯಗೊಂಡಿದ್ದು, ವಿಶಾಖಪಟ್ಟಣಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ; ಬೆಂಕಿಯ ಕೆನ್ನಾಲಿಗೆಗೆ 10ಕ್ಕೂ ಹೆಚ್ಚು ಖಾಸಗಿ ಬಸ್​ಗಳು ಸುಟ್ಟು ಭಸ್ಮ
    ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ-ರಗಡ ಪ್ಯಾಸೆಂಜರ್ ರೈಲು ನಡುವೆ ರಾತ್ರಿ 7ಗಂಟೆಯಲ್ಲಿ ಡಿಕ್ಕಿ ಸಂಭವಿಸಿತ್ತು. ಅಲಮಂಡ ಮತ್ತು ಕಂಟಕಪಲ್ಲೆ ಪಟ್ಟಣಗಳ ನಡುವೆ ದುರಂತ ನಡೆದಿದ್ದು, ಅಧಿಕಾರಿಗಳ ಪ್ರಕಾರ ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಮತ್ತೊಂದು ಪ್ಯಾಸೆಂಜರ್​ ರೈಲು ಡಿಕ್ಕಿಹೊಡೆದಿತ್ತು. ಬಳಿಕ ಪಕ್ಕದ ಟ್ರ್ಯಾಕ್​ನಲ್ಲಿ ನಿಂತಿದ್ದ ಗೂಡ್ಸ್​ಗೆ ಡಿಕ್ಕಿಯಾಗಿದ್ದರಿಂದ ಅನೇಕ ಕೋಚ್‌ಗಳು ಹಳಿತಪ್ಪಿದ್ದವು. ಸಿಗ್ನಲ್ ಸಮಸ್ಯೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಟ್ರ್ಯಾಕ್​ ಸರಿಪಡಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳನ್ನು ವಿಶಾಖಪಟ್ಟಣಂ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50,000ರೂ.ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಜೂನ್‌ನಲ್ಲಿ ಒಡಿಶಾದಲ್ಲಿ ಇದೇ ರೀತಿ ಮೂರು ರೈಲುಗಳು ಡಿಕ್ಕಿಯಾಗಿ ಸುಮಾರು 300 ಮಂದಿ ಮೃತಪಟ್ಟಿದ್ದರು. ಆಗಸ್ಟ್‌ನಲ್ಲಿ ಪ್ರಯಾಣಿಕರೊಬ್ಬರು ಚಹಾ ಮಾಡಲು ಪ್ರಯತ್ನಿಸುತ್ತಿದ್ದಾಗ ದಕ್ಷಿಣ ಭಾರತದಲ್ಲಿ ನಿಲ್ಲಿಸಿದ್ದ ಕೋಚ್‌ಗೆ ಬೆಂಕಿ ಹೊತ್ತಿಕೊಂಡು ಕನಿಷ್ಠ ಒಂಬತ್ತು ಜನ ಸಾವನ್ನಪ್ಪಿದ್ದರು.

    ತೆಲಂಗಾಣದಲ್ಲಿ ಸಂಸದನಿಗೆ ಚಾಕು ಇರಿತ: ಪಾದ್ರಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ದಾಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts