More

    ಅಮೆರಿಕದಲ್ಲಿ ನಡೆಯುವ ವಿಶ್ವಸಂಸ್ಥೆಯ ಕಾರ್ಯಕ್ರಮಕ್ಕೆ ಆಹ್ವಾನ: ಗ್ರಾಮ ಪಂಚಾಯಿತಿ ಸದಸ್ಯೆಗೆ ಒಲಿದ ಗೌರವ

    ವಿಜಯವಾಡ: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವೈ.ಎಸ್ ಜಗನ್​ ಮೋಹನ್ ರೆಡ್ಡಿ ಅವರು ಹಲವು ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದ್ದಲ್ಲದೆ, ಬೇರೆ ದೇಶಗಳಿಂದ ರಾಜ್ಯಕ್ಕೆ ಬಂಡವಾಳವನ್ನು ತರಲು ಶ್ರಮಿಸುತ್ತಿದ್ದಾರೆ. ಐದು ವರ್ಷಗಳ ಆಡಳಿತದಲ್ಲಿ ವಿಶ್ವಸಂಸ್ಥೆಯಂತಹ ಅತ್ಯುನ್ನತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಆಂಧ್ರಕ್ಕೆ ಅಪರೂಪದ ಗೌರವ ಸಿಕ್ಕಿದೆ. ಆರು ತಿಂಗಳ ಹಿಂದೆ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಹತ್ತು ಬಡ ವಿದ್ಯಾರ್ಥಿಗಳಿಗೆ ನ್ಯೂಯಾರ್ಕ್ ನಗರದ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಹೈಲೆವೆಲ್ ಪೊಲಿಟಿಕಲ್ ಫೋರಮ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತ್ತು. ಇತ್ತೀಚೆಗೆ ಆಂಧ್ರ ಪ್ರದೇಶದ ಗ್ರಾಮ ಪಂಚಾಯಿತಿ ಸದಸ್ಯೆಗೆ ಅಪರೂಪದ ಗೌರವ ಸಿಕ್ಕಿದೆ.

    ಅಮೆರಿಕದಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೇ 3ರಂದು ನಡೆಯಲಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಆಯೋಗದ 57ನೇ ಅಧಿವೇಶನದಲ್ಲಿ ಭಾಗವಹಿಸಲು ಭಾರತದ ಮೂವರು ಸಾರ್ವಜನಿಕ ಪ್ರತಿನಿಧಿಗಳಿಗೆ ಅವಕಾಶ ಸಿಕ್ಕಿದೆ. ಈ ಮೂವರಲ್ಲಿ ಆಂಧ್ರಪ್ರದೇಶದ ಗ್ರಾಮ ಪಂಚಾಯಿತಿ ಸದಸ್ಯೆಗೂ ಆಹ್ವಾನ ಬಂದಿದೆ. ಪಶ್ಚಿಮ ಗೋದಾವರಿ ಜಿಲ್ಲೆ ಇರಗವರಂ ಮಂಡಲದ ಪೇಕೇರು ಗ್ರಾಮ ಪಂಚಾಯಿತಿ ಸದಸ್ಯೆ ಹೇಮಾ ಕುಮಾರಿ ಅವರಿಗೆ ಆಹ್ವಾನ ನೀಡಲಾಗಿದೆ.

    ಆಂಧ್ರದಿಂದ ಹೇಮಾ ಕುಮಾರಿ, ತ್ರಿಪುರಾದಿಂದ ಸೆಪಾಹಿಜಾಲಾ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಪ್ರಿಯಾ ದಸ್ದತ್ತಾ ಮತ್ತು ರಾಜಸ್ಥಾನದ ಝಂಜುನ್ ಜಿಲ್ಲೆಯ ಲಂಬಿಯಾಹಿರ್​ನ ಗ್ರಾಮ ಪಂಚಾಯಿತಿ ಸದಸ್ಯೆ ನೀರು ಯಾದವ್​ ವಿಶೇಷ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಈ ಮೂವರು ಭಾರತದ ಸ್ಥಳೀಯ ಸರ್ಕಾರದಲ್ಲಿ ಮಹಿಳೆಯರ ಪಾತ್ರ, ಮಹಿಳೆಯರ ಸಬಲೀಕರಣದ ಹಾದಿಗಳು ಮತ್ತು ಸಾಧಿಸಿದ ಗುರಿಗಳ ಬಗ್ಗೆ ಮಾತನಾಡಲಿದ್ದಾರೆ.

    ಗ್ರಾಮ ಪಂಚಾಯಿತಿ ಸದಸ್ಯೆ ಕುನುಕು ಹೇಮಾ ಕುಮಾರಿ ವಿಷಯಕ್ಕೆ ಬರುವುದಾದರೆ, 2021ರ ಏಪ್ರಿಲ್ ತಿಂಗಳಲ್ಲಿ ಪೇಕೇರು ಗ್ರಾಮದ ಪಂಚಾಯಿತಿ ಸದಸ್ಯೆಯಾಗಿ ಆಯ್ಕೆಯಾದರು. ಅವರು 2022ರಲ್ಲಿ ಕಾಕಿನಾಡ ಜೆಎನ್​ಟಿಯುನಿಂದ ಎಂಟೆಕ್​ ಪದವಿ ಪಡೆದರು. ಐದು ವರ್ಷಗಳ ಕಾಲ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಹೇಮಕುಮಾರಿ ಪ್ರಸ್ತುತ ಮಂಡಲ ಪಂಚಾಯಿ ಚೇಂಬರ್ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯಿತಿ ಚೇಂಬರ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

    ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲು ಮೂರು ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಕೇಂದ್ರ ಪಂಚಾಯತ್ ರಾಜ್ ಇಲಾಖೆ ವಿಶ್ವಸಂಸ್ಥೆಗೆ ಶಿಫಾರಸು ಮಾಡಿರುವುದು ಗಮನಾರ್ಹ. (ಏಜೆನ್ಸೀಸ್​)

    ಕಾರ್ಯಕ್ರಮ ಆಯೋಜಕರ ಮಹಾ ಎಡವಟ್ಟು: ವೇದಿಕೆ ಮೇಲೆಯೇ ಕಣ್ಣೀರಿಟ್ಟ ನವ್ಯಾ ನಾಯರ್​!

    ಪ್ರಜ್ವಲ್​​ ರೇವಣ್ಣ ಕೇಸ್​: ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುವುದು ಹಾಸ್ಯಾಸ್ಪದ ಎಂದ ನಟ ಚೇತನ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts