ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ಆ್ಯಪ್ ದಿನಕ್ಕೊಂದು ಬದಲಾವಣೆಗಳನ್ನು ಮಾಡುವ ಮೂಲಕ ತನ್ನ ಬಳಕೆದಾರರನ್ನು ಮತ್ತಷ್ಟು ಆಕರ್ಷಿಸುತ್ತಿದೆ. ಇದೀಗ ಮತ್ತೊಂದು ಹೊಸ ವೈಶಿಷ್ಟ್ಯವನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಬಳಕೆದಾರರಿಗೆ ಉತ್ತಮ ವೇದಿಕೆಯಾಗುತ್ತಿದೆ. ಆ ಹೊಸ ವೈಶಿಷ್ಟ್ಯವೇನು? ಅದರ ಉಪಯೋಗವೇನು? ಮತ್ತು ಅದರಿಂದಾಗುವ ಲಾಭ ಹಾಗೂ ಮಹತ್ವ ತಿಳಿಯಿರಿ.
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ಆಗಾಗ ಅಪ್ಡೇಟ್ ಆಗುತ್ತಲೇ ಇರುತ್ತೆ. ಆಂಡ್ರಾಯ್ಡ್, ಐಒಎಸ್ ಮತ್ತು ವೆಬ್ ಸೇರಿದಂತೆ ಎಲ್ಲಾ ವಾಟ್ಸ್ಆ್ಯಪ್ ಆವೃತ್ತಿಗಳು ಹೊಸ ಆಪರೇಟಿಂಗ್ ಸಿಸ್ಟಮ್‌ಗಳಿಗೆ ಹೊಂದಿಕೊಳ್ಳಲು ಪ್ರತಿ ತಿಂಗಳು ಹೊಸ ಸಿಸ್ಟಮ್ ನವೀಕರಣಗಳನ್ನು ಸ್ವೀಕರಿಸುತ್ತವೆ.
ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ಗಳೊಂದಿಗೆ ಬಂದಾಗ ಅದು ಕೆಲ ಹಳೆಯ ಆಪರೇಟಿಂಗ್ ಸಿಸ್ಟಮ್‌ಗಳಲ್ಲಿ ಬೆಂಬಲ ಕಳೆದುಕೊಳ್ಳುತ್ತದೆ. ಇದೀಗ ವಾಟ್ಸ್ಆ್ಯಪ್ ಅಕ್ಟೋಬರ್ 24 ರ ನಂತರ ಆಂಡ್ರಾಯ್ಡ್ OS ಆವೃತ್ತಿ 4.1 ಮತ್ತು ಅದಕ್ಕಿಂತ ಹಳೆಯದಾದ ಸ್ಮಾರ್ಟ್‌ಫೋನ್‌ಗಳಲ್ಲಿ ತನ್ನ ಬೆಂಬಲವನ್ನು ಕೊನೆಗೊಳಿಸುವುದಾಗಿ ಹೇಳಿದೆ.
ಕೆಲವು ಜನರು ತಮ್ಮ ಸ್ಮಾರ್ಟ್ಫೋನ್ಗಳನ್ನು ಅಪ್ಡೇಟ್ ಮಾಡದೆ ಅಥವಾ ಹಳೆಯ ಸಾಫ್ಟ್‌ವೇರ್ ಬಳಸುತ್ತಿರುವುದು ಕಂಡುಬಂದಿದೆ. ಈ ಮೊಬೈಲ್ಗಳು ಇತ್ತೀಚಿನ ಭದ್ರತಾ ನವೀಕರಣಗಳನ್ನು ಹೊಂದಿಲ್ಲದಿರಬಹುದು.
ವಾಟ್ಸ್ಆ್ಯಪ್ ಮುಂದಿನ ನೂತನ ಅಪ್ಡೇಟ್ಗಾಗಿ ಕೆಲ ಫೋನುಗಳಲ್ಲಿ ಕಾರ್ಯಚರಣೆ ನಿಲ್ಲಿಸಲಿದೆ,” ಎಂದು ವಾಟ್ಸ್ಆ್ಯಪ್ FAQ ನಲ್ಲಿ ಬರೆದುಕೊಂಡಿದೆ.