

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ 14ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ ವರ್ಧಂತ್ಯುತ್ಸವ ಜೂನ್ 1, 2ರಂದು ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ನಡೆಯಲಿದೆ.
ಜೂನ್ 1ರಂದು ಸಾಮೂಹಿಕ ಚಂಡಿಕಾಯಾಗ, ವೈದಿಕ ಕಾರ್ಯಕ್ರಮ, ಧಾರ್ಮಿಕ ಸಭೆ, ವಾಸ್ತುಶಿಲ್ಪ ಮತ್ತು ಶಿಲ್ಪಕಲೆ ಸಾಧಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ಸಾಧಕರಿಗೆ ಆನೆಗುಂದಿ ಶ್ರೀ ಪ್ರಶಸ್ತಿ ಪ್ರಧಾನ, ಯುವಶಿಲ್ಪಿಗಳಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ.
ಜೂನ್ 2ರಂದು ‘ವಿಶ್ವಕರ್ಮ ಸಾಂಸ್ಕೃತಿಕ ಪರಂಪರೆಯ ನಿರ್ಮಾತೃ ಇತಿಹಾಸದ ಪುನರಾವಲೋಕನ ಭವಿಷ್ಯದ ಅನಾವರಣ’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಮಣಿಪುರ, ಗುಜರಾತ್, ಪಂಜಾಬ್ ಹಾಗೂ ರಾಜಸ್ಥಾನಗಳಿಂದ ಸಂಪನ್ಮೂಲ ವ್ಯಕ್ತಿಗಳು ಹಾಗೂ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ವಿಚಾರ ಸಂಕಿರಣದ ಯಶಸ್ಸಿಗಾಗಿ ವಿವಿಧ ಸಮಿತಿ ರಚಿಸಲಾಗಿದ್ದು, ಮಹಾಸಂಸ್ಥಾನದಲ್ಲಿ ಹಾಗೂ ಆನ್ಲೈನ್ನಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಯಶಸ್ಸಿಗೆ ತೊಡಗಿಸಿಕೊಂಡಿದ್ದಾರೆ.
ಆನೆಗುಂದಿ ಪ್ರತಿಷ್ಠಾನ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರ ಹೋಬಳಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಆಶೀರ್ವಚನ ನೀಡಿದರು. ಕೋಶಾಧಿಕಾರಿ ಅರವಿಂದ ವೈ.ಆಚಾರ್ಯ ಬೆಳುವಾಯಿ, ಆನೆಗುಂದಿ ಮೂಲಮಠದ ಅಧ್ಯಕ್ಷ ದಿನೇಶ್ ಆಚಾರ್ಯ ಪಡುಬಿದ್ರಿ, ಸಹ ಟ್ರಸ್ಟ್ಗಳ ಪದಾಧಿಕಾರಿಗಳಾದ ಬಿ.ಸೂರ್ಯಕುಮಾರ್ ಹಳೆಯಂಗಡಿ, ಸುಂದರ ಆಚಾರ್ಯ ಬೆಳುವಾಯಿ, ಗಣೇಶ್ ಆಚಾರ್ಯ ಕೆಮ್ಮಣ್ಣು, ಸಂಧ್ಯಾ ಲಕ್ಷ್ಮಣ ಆಚಾರ್ಯ, ಮೋಹನ್ ಕುಮಾರ್ ಬೆಳ್ಳೂರು, ಪ್ರಭಾಕರ ಆಚಾರ್ಯ ಕೋಟೆಕಾರು, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ದಿನೇಶ್ ಆಚಾರ್ಯ ಕಿನ್ನಿಗೋಳಿ, ಬಿ.ಯಜ್ಞೇಶ ಆಚಾರ್ಯ ಮಂಗಳೂರು, ಮೋಹನ್ ಕುಮಾರ್ ಬೆಳ್ಳೂರು, ರಮಾ ನವೀನ್ ಕಾರ್ಕಳ, ಜನಾರ್ದನ ಆಚಾರ್ಯ ಆರಿಕ್ಕಾಡಿ, ಮಧುಕರ ಚಂದ್ರಶೇಖರ ಆಚಾರ್ಯ ಹೊನ್ನಾವರ, ಕೆ.ರಾಘವೇಂದ್ರ ಆಚಾರ್ಯ ಉಡುಪಿ, ವಿಠಲ ಆಚಾರ್ಯ ಎಲ್ಲೂರು, ಅಕ್ಷಯ ಶರ್ಮ ಕಟಪಾಡಿ, ವಾದಿರಾಜ ಆಚಾರ್ಯ ಮಂಗಳೂರು, ಬಾಲಕೃಷ್ಣ ಆಚಾರ್ಯ ಮೂಡುಬಿದಿರೆ, ಶಿವರಾಮ ಆಚಾರ್ಯ ಉಳಿಯ, ಗಣೇಶ್ ಆಚಾರ್ಯ ಕೋಟ, ಪುರುಷೋತ್ತಮ ಆಚಾರ್ಯ ಬದಿಯಡ್ಕ, ವಸಂತ ಆಚಾರ್ಯ ಮಜೂರು ಭಾಗವಹಿಸಿ ದ್ದರು. ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ.ಆಚಾರ್ ಕಂಬಾರು ನಿರ್ವಹಿಸಿದರು.