

ಬೆಂಗಳೂರು: ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ನಡುವೆಯೇ ನಗರದ ಮೆಜಿಸ್ಟಿಕ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಗಣಿಯಿಂದ ಬೆಂಗಳೂರಿಗೆ ಬಂದಿದ್ದ ಚನ್ನಪ್ಪ (77) ಎಂಬುವವರು ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಹೃದಯಘಾತದಿಂದ ಸಾವಿಗೀಡಾಗಿದ್ದಾರೆ. ಚನ್ನಪ್ಪ ಅವರು ಆನೇಕಲ್ನ ಚಿಕ್ಕನಹಳ್ಳಿ ನಿವಾಸಿ.
6ನೇ ವೇತನ ಆಯೋಗ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಸಾರಿಗೆ ನೌಕರರು ಸಂಚಾರವನ್ನು ಬಂದ್ ಮಾಡಿ ಧರಣಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದೆಯಾಗಿದೆ. ಮುಷ್ಕರದ ಅರಿವಿಲ್ಲದೆ ಬಸ್ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಇನ್ನೊಂದೆಡೆ ಖಾಸಗಿ ಬಸ್ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೀಳುತ್ತಿರುವ ಆರೋಪಗಳು ಸಹ ಕೇಳಿಬರುತ್ತಿವೆ.