Anganavadi Strike ಕರ್ತವ್ಯಕ್ಕೆ ಗೈರಾಗಿ 3 ದಿನದ ಧರಣಿಗೆ ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

Anganavadi Strike
Published on

ಕಾರವಾರ Anganavadi Strike  ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಗೆ ಇಳಿದಿದ್ದಾರೆ.

ಮಂಗಳವಾರ ನಗರದ ಮಾಲಾದೇವಿ ಮೈದಾನದಿಂದ ಹೊರಟು, ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟಾ ಸಭೆ ನಡೆಸಿದರು.

ಮುಖ್ಯಮಂತ್ರಿ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸಲ್ಲಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಡಿ.17 ರವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ಅಂಗನವಾಡಿ ಕಾರ್ಯಕರ್ತೆಯರ ಸಂಘ ತಿಳಿಸಿದೆ.

Anganavadi Strike ಪ್ರಮುಖ ಬೇಡಿಕೆಗಳು

ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರನ್ನು ಕಾಯಂ ಮಾಡಬೇಕು. ಗ್ರಾಚುಟಿ ಹಣವನ್ನು ತಕ್ಷಣ ಮಂಜೂರು ಮಾಡಬೇಕು ಮತ್ತು ತಾರತಮ್ಯವಿಲ್ಲದೇ ಎಲ್ಲರಿಗೂ ಅನ್ವಯಿಸಬೇಕು. 2018 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವ ಧನ ಹೆಚ್ಚಿಸಿಲ್ಲ.

ಈ ಬಾರಿ ಹೆಚ್ಚಿಸಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಗೌರವಧನವನ್ನು 15 ಸಾವಿರ ರೂ.ಗೆ ಹೆಚ್ಚಿಸಬೇಕು. ನಿವೃತ್ತಿ ಉಪಧನ, ಇಡಿಗಂಟು ನೀಡಬೇಕು. ಮಾಸಿಕ 10 ಸಾವಿರ ರೂ. ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು. ಯಮುನಾ ಗಾಂವಕರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಜಯಶ್ರೀ ಹೀರೇಕರ್, ವಿದ್ಯಾ ವೈದ್ಯ, ಗೀತಾ ನಾಯ್ಕ, ಲಲಿತಾ ಹೆಗಡೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net