ಬೆಂಗಳೂರು ಗ್ರಾಮಾಂತರದ ನಾಲ್ಕು ತಾಲ್ಲೂಕುಗಳ ಅಂಗನವಾಡಿಗಳಲ್ಲಿವೆ ಹುದ್ದೆಗಳು

Anganawadi
Published on

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೆಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ಯೋಜನೆ ವ್ಯಾಪ್ತಿಯಲ್ಲಿ ಹುದ್ದೆಗಳಿವೆ.

13 ಅಂಗನವಾಡಿ ಕಾರ್ಯಕರ್ತೆ ಮತ್ತು 50 ಅಂಗನವಾಡಿ ಸಹಾಯಕಿಯರ ಹುದ್ದೆಗಳಿವೆ.

ಕಾರ್ಯಕರ್ತೆಯಾಗಲು ಎಸ್ಸೆಸ್ಸೆಲ್ಸಿ ಹಾಗೂ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ, ಗರಿಷ್ಠ 9 ನೇ ತರಬೇತಿ ಪಾಸಾಗಿರಬೇಕು. ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಪೂರೈಸಿರಬೇಕು.

ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಸೆಪ್ಟೆಂಬರ್ 9 ರೊಳಗಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net