More

    ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಪಟ್ಟು ; ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

    ತುಮಕೂರು: ಕನಿಷ್ಠ ವೇತನ 21 ಸಾವಿರ ನಿಗದಿ, ಮಾಸಿಕ 10 ಸಾವಿರ ರೂ., ನಿವೃತ್ತಿ ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾವಿರಾರು ಅಂಗನವಾಡಿ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.

    ಕರೊನಾ ಭೀತಿಯ ನಡುವೆಯೂ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಸಿಐಟಿಯು ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಷ್ಟ್ರೀಯ ನೂತನ ಶಿಕ್ಷಣ ನೀತಿ-2020ರಡಿ ಅಂಗನವಾಡಿ ರಕ್ಷಿಸಿ, ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವಂತೆ ಆಗ್ರಹಿಸಿದರು.

    ಬಾಲ್ಯ ವ್ಯವಸ್ಥೆಯ ಪಾಲನೆ ಹಾಗೂ ಶಿಕ್ಷಣ (ಇಸಿಸಿಇ)ವನ್ನು ಉಚಿತವಾಗಿ ಹಾಗೂ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳಲ್ಲೇ ಕೊಡಲು ಶಾಸನ ಜಾರಿಬೇಕು. ಅಲ್ಲದೇ ಸೇವಾಜೇಷ್ಠತೆ ಆಧಾರದಲ್ಲಿ ವೇತನ ನಿಗದಿಗೊಳಿಸುವಂತೆ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಜಿ.ಕಮಲಾ ಒತ್ತಾಯಿಸಿದರು.

    ಐಸಿಡಿಎಸ್‌ಗೆ ಪ್ರತ್ಯೇಕ ನಿರ್ದೇಶನಾಲಯವನ್ನು ರಚಿಸಬೇಕು. ರಾಜ್ಯದಲ್ಲಿ ಈಗಾಗಲೇ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ ಬಿಡುಗಡೆ ಮಾಡಬೇಕು. ಎನ್‌ಪಿಎಸ್ ಲೈಟ್ ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಒತ್ತಾಯಿಸಿದರು. ಜಿ.ಎಸ್.ಅನಸೂಯ, ಗುಲ್ಜಾರ ಮತ್ತಿತರರು ಪ್ರತಿಭಟನೆ ನೇತೃತವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts