ಅಂಗನವಾಡಿ ಕೇಂದ್ರ ಬಿಲ್ ಎತ್ತುವಳಿ ಆರೋಪ

press meet
press meet
Published on

 ರಾಯಚೂರು ತಾಲೂಕಿನ ಮುರಾಂಪೂರ ತಾಂಡಾದಲ್ಲಿ ನೂತನವಾಗಿ ಕೈಗತ್ತಿಕೊಂಡ ಕೇಂದ್ರ ಕಟ್ಟಡ ಪೂರ್ಣಗೊಳಿಸದೆ ಬಿಲ್ ಎತ್ತುವಳಿ ಮಾಡಿದ್ದಾರೆಂದು ಆರೋಪಿಸಿ ಬಿಲ್ ಎತ್ತುವಳಿ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯ ಗಣೇಶ ನಾಯಕ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2024- 25ನೇ ಸಾಲಿನಲ್ಲಿ ತಾಂಡಾದಲ್ಲಿ ಅರೋಗ್ಯ ಮತ್ತು ಶೈಕ್ಷಣಿಕ ಮೂಲ ಸೌಕರ್ಯ ಯೋಜನೆಯಡಿ 10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿ ಪೂರ್ಣಗೊಳಿಸದೆ ಅರ್ಧಕ್ಕೆ ಸ್ಥಗಿತಗೊಳಿಸಿ ಸಂಪೂರ್ಣ ಬಿಲ್ ಎತ್ತುವಳಿ ಮಾಡಿದ್ದಾರೆಂದು ಆರೋಪಿಸಿದರು.

ಕಾಮಗಾರಿ ಅನುಷ್ಠಾನ ಇಲಾಖೆ ಕಾಮಗಾರಿಯನ್ನು ಕಳಪೆ ಮಟ್ಟದಲ್ಲಿ ನಿರ್ವಹಿಸುವ ಮೂಲಕ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಆದರಿಂದ ಸಂಬಂದಪಟ್ಟ ಅಧಿಕಾರಿಗಳು ತಾಂಡಾದಲ್ಲಿ ಕಾಮಗಾರಿಯನ್ನು ಪರಿಶೀಲಿಸಿ ತಪಿತಸ್ಥರ ವಿರುದ್ಧ ಸೂಕ್ತ ಜರುಗಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net