More

    ಪಿಂಚಣಿ ಜಾರಿಗೊಳಿಸಲು ಒತ್ತಾಯ: ಅಂಗನವಾಡಿ ನೌಕರರ ಪ್ರತಿಭಟನೆ

    ಮಂಡ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸುಮಾರು 20 ರಿಂದ 30 ವರ್ಷಗಳ ಕಾಲ ನಿರಂತರವಾಗಿ ದುಡಿದು ನಿವೃತ್ತರಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಾಗೂ ಮಾಸಿಕ ಪಿಂಚಣಿ ಜಾರಿಗೊಳಿಸಬೇಕೆಂದು ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ನೌಕರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ವೃದ್ಧಾಪ್ಯ ಜೀವನವನ್ನು ಅತ್ಯಂತ ಜುಗುಪ್ಸೆಯಿಂದ ನಡೆಸುತ್ತಿದ್ದಾರೆ. ಕೇವಲ ಕನಿಷ್ಠ ಗೌರವಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಆರು ವರ್ಷ ವಯೋಮಾನದೊಳಗಿನ ಮಕ್ಕಳು ಮತ್ತು ಅವರ ತಾಯಂದಿರು ಪೌಷ್ಟಿಕ ಆಹಾರ, ಆರೋಗ್ಯ ರಕ್ಷಣೆಯೊಂದಿಗೆ ಶಾಲಾ ಪೂರ್ವ ಶಿಕ್ಷಣದ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಯ ರೂವಾರಿಗಳಾಗಿದ್ದಾರೆ. ಇಂತಹ ಮಹತ್ತರ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಉದ್ಯೋಗಿಗಳಿಗೆ ಸರ್ಕಾರಗಳು ಅವರ ಕ್ಷೇಮಾಭಿವೃದ್ಧಿಯ ಬಗ್ಗೆ ಯಾವುದೇ ಕಾಳಜಿ ತೋರದೆ ನಿರ್ಲಕ್ಷಿಸಿಕೊಂಡು ಬರಲಾಗುತ್ತಿದೆ ಎಂದು ಆಪಾದಿಸಿದರು.
    ರುಕ್ಮಿಣಿ ಪಾಂಡವಪುರ, ಮೀನಾಕ್ಷಿ ಶ್ರೀರಂಗಪಟ್ಟಣ, ಶಿವಲಿಂಗಮ್ಮ ಮದ್ದೂರು, ಪಾರ್ವತಮ್ಮ, ವಿಜಯಲಕ್ಷ್ಮೀ, ಚಂದ್ರಕಲಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts