18.5 C
Bangalore
Monday, December 16, 2019

ಅಂಗನವಾಡಿ ವಿಲೀನ ಪ್ರಕ್ರಿಯೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

-ಮಂಜುನಾಥ ಕೋಳಿಗುಡ್ಡ 

ಬೆಳಗಾವಿ: ರಾಜ್ಯಾದ್ಯಂತ ಐದಕ್ಕಿಂತ ಕಡಿಮೆ ಮಕ್ಕಳಿರುವ ಅಂಗನವಾಡಿ ಕೇಂದ್ರಗಳನ್ನು ಪಕ್ಕದ ಕೇಂದ್ರಗಳಲ್ಲಿ ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ..!

ರಾಜ್ಯದಲ್ಲಿ ಖಾಸಗಿ ಎಲ್‌ಕೆಜಿ, ಯುಕೆಜಿ ಸಂಸ್ಥೆಗಳನ್ನು ನಿಯಂತ್ರಿಸಲು , ಅಂಗನವಾಡಿ ಕೇಂದ್ರಗಳನ್ನು ಶೈಕ್ಷಣಿಕವಾಗಿ ಬಲಿಷ್ಠಗೊಳಿಸಲು, ಸರ್ಕಾರ ಸೌಲಭ್ಯಗಳನ್ನು ಸದುಪಯೋಗ ಪಡಿಸುವ ನಿಟ್ಟಿನಲ್ಲಿ ಕಡಿಮೆ ಸಂಖ್ಯೆಯಿರುವ ಅಂಗನವಾಡಿ ಕೇಂದ್ರಗಳನ್ನು ವಿಲೀನಗೊಳಿಸಲು ಸರ್ಕಾರ ನಿರ್ಧರಿಸಿದೆ. ಮತ್ತೊಂದೆಡೆ 5ಕ್ಕಿಂತ ಕಡಿಮೆ ಸಂಖ್ಯೆ ಹೊಂದಿರುವ ಕೇಂದ್ರಗಳ ಪಟ್ಟಿ ತಯಾರಿಸಲು ಸಿದ್ಧತೆ ಆರಂಭಿಸಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಶೇ.60 ರಷ್ಟು ಮಕ್ಕಳ ಹಾಜರಾತಿ ಇಲ್ಲದಿದ್ದರೂ ಅಧಿಕಾರಿಗಳು, ಸಹಾಯಕಿಯರು ಶೇ.100 ರಷ್ಟು ಮಕ್ಕಳ ಹಾಜರಾತಿ ತೋರಿಸುತ್ತಿದ್ದಾರೆ. ಇದಕ್ಕೆ ತಕ್ಕಂತೆ ಆಹಾರ ಪದಾರ್ಥ ಪಡೆಯುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ನಿತ್ಯ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಕೆಲವರು ಆಹಾರ ಪದಾರ್ಥ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಜಿಪಂ,ತಾಪಂ ಹಾಗೂ ಗ್ರಾಪಂ ಸದಸ್ಯರು ಪ್ರತಿ ಸಭೆಯಲ್ಲಿ ದೂರು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಡಿಮೆ ಮಕ್ಕಳ ಸಂಖ್ಯೆ ಹೊಂದಿರುವ ಕೇಂದ್ರಗಳನ್ನು ವಿಲೀನಗೊಳಿಸಿ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ 5294 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 3,500 ಅಧಿಕ ಕೇಂದ್ರಗಳಲ್ಲಿ 3ರಿಂದ 6 ವರ್ಷದ ಒಳಗಿನ 80 ಸಾವಿರಕ್ಕೂ ಅಧಿಕ ಮಕ್ಕಳು ನಿತ್ಯ ಅಂಗನವಾಡಿಗಳಿಗೆ ಬಂದು ಹೋಗುತ್ತಿದ್ದಾರೆ. ಆದರೆ, ನಗರ, ಪಟ್ಟಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ವಾಸ್ತವವಾಗಿ ಮಕ್ಕಳ ಕೊರತೆ ಎದುರಿಸುತ್ತಿರುವುದು ನಿಜ. ಆದರೆ, ಕನಿಷ್ಠ 15 ರಿಂದ 20 ಮಕ್ಕಳನ್ನು ಹೊಂದಿರುವ ಕೇಂದ್ರಗಳಿವೆಯೇ ವಿನಾ 5ಕ್ಕಿಂತ ಕಡಿಮೆ ಹೊಂದಿರುವ ಅಂಗನವಾಡಿ ಕೇಂದ್ರಗಳು ಬೆಳಗಾವಿ ಜಿಲ್ಲೆಯಲ್ಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಡ , ಕೂಲಿ ಕಾರ್ಮಿಕರು ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಶಾಲೆ ಪೂರ್ವ ಶಿಕ್ಷಣ ನೀಡುವುದರ ಜತೆಗೆ ಆಹಾರ ತಯಾರಿಸಿ ಹಂಚುತ್ತಿದ್ದಾರೆ. ಮಕ್ಕಳ ಆರೋಗ್ಯ ತಪಾಸಣೆ, ರೋಗ ನಿರೋಧಕ ಚುಚ್ಚುಮದ್ದು, ತಾಯಂದಿರ ಸಭೆ, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಗತ್ಯ ಆಹಾರ ವಿತರಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರಿ ಯೋಜನೆಗಳಾದ ಭಾಗ್ಯಲಕ್ಷ್ಮೀ, ಸ್ತ್ರೀಗುಂಪುಗಳ ರಚನೆ, ಜನಗಣತಿ ಕೆಲಸ ಮಾಡುತ್ತಿದ್ದಾರೆ. ಇದೀಗ ಅಂಗನವಾಡಿಗಳ ವಿಲೀನದಿಂದ ಬಾಣಂತಿ ಹಾಗೂ ಅನಕ್ಷರಸ್ಥರ ಮಹಿಳೆ, ತಾಯಂದರಿರಿಗೆ ತೊಂದರೆಯಾಗಲಿದೆ.

ಸರ್ಕಾರವು ವಿಲೀನ ಪ್ರಕ್ರಿಯೇ ತಕ್ಷಣ ಕೈಬಿಡಬೇಕು. 2012ರಲ್ಲಿ ಅಂಗನವಾಡಿ ಕೇಂದ್ರಗಳ ವಿಲೀನಕ್ಕೆ ಆದೇಶ ಹೊರಡಿಸಿತ್ತು. ಹೋರಾಟದ ಬಳಿಕ ಕೈಬಿಟ್ಟಿತ್ತು ಎಂದು ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತರು ಹಾಗೂ ಹೋರಾಟಗಾರರು ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಹಾರ ಪದಾರ್ಥ ದುರಪಯೋಗ

ಜಿಲ್ಲೆಯಲ್ಲಿ 5,294 ಅಂಗನವಾಡಿ ಕೇಂದ್ರಗಳಿಗೆ ಸರ್ಕಾರವು ಕೋಟ್ಯಂತರ ಅನುದಾನ ವೆಚ್ಚ ಮಾಡಿ ನಿತ್ಯ ಪೌಷ್ಠಿಕ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದೆ. ಆದರೆ, ವಾಸ್ತವದಲ್ಲಿ ಮಕ್ಕಳು, ಬಾಣಂತಿ, ತಾಯಂದಿರರಿಗೆ ಮುಟ್ಟುತ್ತಿಲ್ಲ. ಅಂಗನವಾಡಿ ಸಿಬ್ಬಂದಿಯೇ ಮನೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ ಪ್ರತಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗುತ್ತಿದೆ. ಆದರೆ, ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಿಪಂ,ತಾಪಂ ಸದಸ್ಯರು ದೂರಿದ್ದಾರೆ.

ಕಡಿಮೆ ಸಂಖ್ಯೆ ಹೊಂದಿರುವ ಅಂಗನವಾಡಿಗಳನ್ನು ವಿಲೀನಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಆದರೆ, ಇನ್ನೂ ಸರ್ಕಾರದಿಂದ ಅಧಿಕೃತವಾಗಿ ಆದೇಶ ಬಂದಿಲ್ಲ.
| ಡಾ.ಕೆ.ವಿ.ರಾಜೇಂದ್ರ, ಜಿಪಂ ಸಿಇಒ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...