28.5 C
Bengaluru
Monday, January 20, 2020

ಏನ್ರೀ, ನಿಮ್ಮ ಇಲಾಖೆಯ ಕರ್ಮ..

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಸವಣೂರ: ಕಳೆದ ಸಭೆಗೆ ಇಲಾಖೆಯಿಂದ ಯಾವುದೇ ಪ್ರಗತಿ ವರದಿ ಇಲ್ಲ ಎಂದು ಹೇಳಿ, ಇಂದಿನ ಸಭೆಗೆ 9 ಪುಟಗಳ ಪ್ರಗತಿ ವರದಿಯನ್ನು ಸಲ್ಲಿಸಿದ್ದೀರಲ್ಲ…ಇದು ಹೇಗೆ ಸಾಧ್ಯ? ಎಂದು ಜಿಪಂ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯ ಎಇಇ ಎಸ್.ಪಿ. ಕಲ್ಲೋಳಕರ ಅವರನ್ನು ತಾಪಂ ಅಧ್ಯಕ್ಷ ತಿಪ್ಪಣ್ಣ ಸುಬ್ಬಣ್ಣನವರ ತರಾಟೆಗೆ ತೆಗೆದುಕೊಂಡರು.

ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಅಭಿವೃದ್ಧಿಗೆ ಬಂದಿದ್ದ ಲಕ್ಷಾಂತರ ರೂ. ಅನುದಾನ ವಾಪಸಾಗಿದೆ. ಇದಕ್ಕೆ ಯಾರು ಹೊಣೆ? ಹೆಸರೂರ ಹಾಗೂ ಕುಣಿಮೆಳ್ಳಿಹಳ್ಳಿ ಗ್ರಾಮಗಳಲ್ಲಿ ಕಾಮಗಾರಿ ಕೈಗೊಂಡವರಿಗೆ ಬಿಲ್ ನೀಡದೇ ಸತಾಯಿಸುತ್ತಿದ್ದೀರಾ? ಚುನಾವಣಾ ನಿಮಿತ್ತ ಮತಗಟ್ಟೆ ಕೇಂದ್ರಗಳಿಗೆ ರ‍್ಯಾಂಪ್ ನಿರ್ವಿುಸಲು ಸೂಚಿಸಿ ಕಾಮಗಾರಿ ಕೈಗೊಂಡವರಿಗೂ ಬಿಲ್ ನೀಡಿಲ್ಲ. ಏನ್ರೀ ನಿಮ್ಮ ಇಲಾಖೆಯ ಕರ್ಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿದ ಎಇಇ ಎಸ್.ಪಿ. ಕಲ್ಲೋಳಕರ, ಚುನಾವಣಾ ವಿಭಾಗದಿಂದ ಹಣ ಬಿಡುಗಡೆಯಾಗದಿರುವುದರಿಂದ ಬಿಲ್ ಪಾವತಿ ವಿಳಂಬವಾಗಿದೆ. ಕಳೆದ ಸಾಲಿನ ಅನುದಾನ ಮರಳಲು ಕ್ರಿಯಾಯೋಜನೆ ತಡವಾಗಿ ನೀಡಲಾಗಿತ್ತು. ಆದ್ದರಿಂದ ಪ್ರಸ್ತಕ ಸಾಲಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಕಾಮಗಾರಿಯನ್ನು ಕೈಗೊಂಡವರಿಗೆ ಹಣ ಪಾವತಿಸಲಾಗುವುದು ಎಂದರು.

ತವರಮೆಳ್ಳಿಹಳ್ಳಿ ಪಿಎಚ್​ಸಿ ಕೇಂದ್ರದಲ್ಲಿ ಸಿಬ್ಬಂದಿ ಕೊರತೆಯಿಂದ ಬಡವರು ಚಿಕಿತ್ಸೆ ಪಡೆಯಲು ತೊಂದರೆಯಾಗುತ್ತಿದೆ ಎಂದು ತಾಪಂ ಉಪಾಧ್ಯಕ್ಷೆ ಜಯಶೀಲಾ ರೊಟ್ಟಿಗವಾಡ ಪ್ರಸ್ತಾಪಿಸಿದರು.

ಪ್ರತಿಕ್ರಿಯಿಸಿದ ಟಿಎಚ್​ಒ ಸತೀಶ ಎ.ಆರ್., ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ತಾಲೂಕಿಗೆ 34 ಕಿರಿಯ ಆರೋಗ್ಯ ಸಹಾಯಕರ ಅವಶ್ಯಕತೆ ಇದೆ. ಆದರೆ, ಇಲ್ಲಿರುವುದು ಕೇವಲ 5 ಜನ. ರಾಜ್ಯಮಟ್ಟದಲ್ಲಿ ಸೆ. 27ರಂದು ಸಿಬ್ಬಂದಿ ಆಯ್ಕೆ ಹಾಗೂ ಸ್ಥಳ ನಿಗದಿ ಕಾರ್ಯ ನಡೆಯಲಿದೆ. ಅಲ್ಲಿ ಸವಣೂರಿಗೆ ಪ್ರಾಶಸ್ಱ ನೀಡಲು ಕೋರಿಕೊಂಡಲ್ಲಿ ಮಾತ್ರ ಸಿಬ್ಬಂದಿ ನೇಮಕ ಆಗಲಿದೆ ಎಂದರು. ಸಭೆಯಲ್ಲಿ ಸರ್ವ ಸದಸ್ಯರ ಕೋರಿಕೆ ಮೇರೆಗೆ ಠರಾವು ಪಾಸ್ ಮಾಡಿ ಸೆ. 20ರಂದು ಶಾಸಕರಿಗೆ ಮನವಿ ನೀಡಲು ತೀರ್ವನಿಸಲಾಯಿತು.

ಕೃಷಿ ಸಾಮಗ್ರಿ ವಿತರಿಸಿ: ರೈತರಿಗೆ ಸಮಯಕ್ಕೆ ಸರಿಯಾಗಿ ಕೃಷಿ ಸಾಮಗ್ರಿಗಳನ್ನು ವಿತರಿಸುವಂತೆ ಕೃಷಿ ಇಲಾಖೆಯ ಸಿಬ್ಬಂದಿ ಎಸ್.ಆರ್. ಕಲಾಲ್ ಅವರಿಗೆ ಸೂಚಿಸಿದ ತಾಪಂ ಇಒ ಎಸ್. ಎಂಡಿ. ಇಸ್ಮಾಯಿಲ್ ಅವರು, ಕೃಷಿ ಇಲಾಖೆಯೊಂದಿಗೆ ಜಲಾನಯನ ಇಲಾಖೆ ಸಂಯೋಜನೆಗೊಂಡಿದೆ. ಆದರೆ, ಪ್ರಗತಿ ವರದಿಯನ್ನು ಮಾತ್ರ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಕೃಷಿ ಇಲಾಖೆಯ ಅಧಿಕಾರಿ ಎಸ್.ಎಸ್. ಮಠಪತಿ ಅವರು, ಇದುವರೆಗೂ ತಾಲೂಕಿನಲ್ಲಿ ಸುಮಾರು 60 ಲಕ್ಷ ರೂ. ಅನುದಾನದಲ್ಲಿ 24 ಚೆಕ್ ಡ್ಯಾಂಗಳನ್ನು ನಿರ್ವಿುಸಲಾಗಿದೆ ಎಂದು ವರದಿ ಸಲ್ಲಿಸಲು ಮುಂದಾದರು. ತಕ್ಷಣ ತಾಪಂ ಅಧ್ಯಕ್ಷ ಸುಬ್ಬಣ್ಣನವರ, ಮೊದಲು ಸಂಪೂರ್ಣ ವರದಿ ಸಲ್ಲಿಸಿ ನಂತರ ಪ್ರತಿಯನ್ನು ನೋಡೋಣ ಎಂದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಗತಿ ವರದಿ ಸಲ್ಲಿಸಿದರು. ತಾಪಂ ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಎಡಿ ಸದಾನಂದ ಅಮರಾಪೂರ ನಿರ್ವಹಿಸಿದರು.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ವಿದ್ಯಾರ್ಥಿಗಳು ಶಿಷ್ಯ ವೇತನ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ಅ. 15ರ ವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ, ಗ್ರಾಪಂ ಹಾಗೂ ಸಂಬಂಧಪಟ್ಟ ಇಲಾಖೆಗಳು ಅರ್ಜಿ ಸಲ್ಲಿಸಲು ಸಹಕಾರ ನೀಡಬೇಕು ಎಂದು ಬಿಇಒ ಎಸ್.ಎಲ್. ಸುಧಾಕರ ಕೋರಿದರು.

ಸರ್ಕಾರಿ ಕಚೇರಿಗಳಲ್ಲಿಯೂ 2 ಲಕ್ಷ 50 ಸಾವಿರ ರೂ. ಮೇಲ್ಪಟ್ಟ ಯಾವುದೇ ವಸ್ತು ಖರೀದಿಗೂ ಕಡ್ಡಾಯವಾಗಿ ಶೇ. 2ರಷ್ಟು ಜಿಎಸ್​ಟಿ ಹಾಗೂ ಟಿಡಿಎಸ್ ಕಟ್ಟಬೇಕಾಗುತ್ತದೆ. ಅಕ್ಟೋಬರ್ 1 ರಿಂದ ಜಾರಿಯಾಗಲಿರುವ ನೂತನ ಕಾನೂನು ಕುರಿತು ತಾಲೂಕು ಅಧಿಕಾರಿಗಳು ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಈ ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗುವುದು.

| ಇರ್ಫಾನ್​ವುಲ್ಲಾ ಖಾನ್, ಜಿಲ್ಲಾ ಜಿಎಸ್​ಟಿ ಸಹಾಯಕ ಆಯುಕ್ತ

 

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...