More

    ಮಕ್ಕಳಿಗೆ ತಾಯಿ ಪ್ರೀತಿ ನೀಡುವ ಅಂಗವಾಡಿ ಕಾರ್ಯಕರ್ತೆಯರು

    ಶಿವಮೊಗ್ಗ: ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಯೋಜನೆಗಳನ್ನು ರೂಪಿಸುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನೀಡುವ ದಾಖಲೆಗಳು ಮಹತ್ವದ ಪಾತ್ರ ವಹಿಸುತ್ತವೆ. ಚಿಕ್ಕ ಮಕ್ಕಳನ್ನು ತಾಯಿಯಂತೆ ಪೋಷಿಸುವ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

    ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ದಿನಾಚರಣೆ ಉದ್ಘಾಟಿಸಿದ ಮಾತನಾಡಿ, ಅಂಗನವಾಡಿಗೆ ಆಗಮಿಸುವ ಮಕ್ಕಳಿಗೆ ತಾಯಿ ಪ್ರೀತಿಯನ್ನು ನೀಡಿ ಅವರನ್ನು ತಿದ್ದುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಕೆಲಸ ಅತ್ಯಂತ ಪವಿತ್ರವಾದುದು ಎಂದರು.
    ಕರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಜನರ ಜೀವನದ ರಕ್ಷಣೆಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಿಂತಿದ್ದರು. ಅವರನ್ನು ಪ್ರಧಾನಿ ನರೇಂದ್ರ ಮೋದಿ ಕರೊನಾ ಸೇನಾನಿಗಳು ಎಂದು ಬಣ್ಣಿಸಿದ್ದರು. ಅಲ್ಪ ಗೌರವಧನ ಎಂದು ಭಾವಿಸದೇ ಸರ್ಕಾರ ನೀಡುವ ಗೌರವಧನಕ್ಕೆ ನೂರು ಪಟ್ಟು ಹೆಚ್ಚು ಕೆಲಸವನ್ನು ಆ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಾಡಿದ್ದಾರೆ ಎಂದು ಹೇಳಿದರು.
    ಕರೊನಾ ಸಂದರ್ಭದಲ್ಲಿ ನಮ್ಮ ಪಕ್ಷ ಹಾಗೂ ಸಂಘಟನೆ, ವೈಯಕ್ತಿಕವಾಗಿ ನಾನು ಕೂಡಾ ಸಂಕಷ್ಟದಲ್ಲಿರುವವರಿಗೆ ನೆರವು ನೀಡಿದ್ದೇನೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನೂ ಗುರುತಿಸಲಾಗಿತ್ತು. ಇವರು ಮಾಡುವ ಕೆಲಸಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಗೌರವಧನ ತೀರಾ ಕಡಿಮೆಯಾಗಿದೆ. ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸರ್ಕಾರದೊಂದಿಗೆ ಸಂವಹನ ನಡೆಸಬೇಕಿದೆ ಎಂದರು.
    ಶಾಸಕ ಎಸ್.ಎನ್.ಚನ್ನಬಸಪ್ಪ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘದ ರಾಜ್ಯಧ್ಯಕ್ಷೆ ಬಿ.ಪ್ರೇಮಾ, ಶಿಶು ಅಭಿವೃದ್ಧಿ ಅಧಿಕಾರಿ ಎನ್.ಚಂದ್ರಪ್ಪ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಕ್ಷಯ ಇದ್ದರು. ಅಂಗನವಾಡಿ ಕಾರ್ಯಕರ್ತೆ ಎನ್.ವನಜಾಕ್ಷಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts