ಚಿತ್ರ ತೆಗೆಯುವಾಗ ಜಾಗ್ರತೆ ವಹಿಸಿ


ವಿಜಯವಾಣಿ ಸುದ್ದಿಜಾಲ ಎಚ್.ಡಿ.ಕೋಟೆ
ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕ ಅನಿಲ್ ಚಿಕ್ಕಮಾದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಲೂಕು ಅರಣ್ಯದಿಂದ ಕೂಡಿರುವ ಪ್ರದೇಶವಾಗಿದ್ದು, ಪ್ರಾಣಿಗಳು ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬರುತ್ತದೆ. ಈ ಸಂದರ್ಭದಲ್ಲಿ ಚಿತ್ರ ತೆಗೆಯುವ ಸಂದರ್ಭದಲ್ಲಿ ಛಾಯಾಗ್ರಾಹಕರು ಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದರು.
ನಿವೃತ್ತಿ ಯೋಧ ಗೋವಿಂದಯ್ಯ ಮತ್ತು ಯೋಧ ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಎಪಿಎಂಸಿ ಅಧ್ಯಕ್ಷ ಬಿ.ಪಿ.ಭಾಸ್ಕರ್, ಛಾಯಾಗ್ರಾಹಕರ ಸಂಘದ ರಾಜ್ಯಾಧ್ಯಕ್ಷ ಕೆ.ಪರಮೇಶ್,ಅಧ್ಯಕ್ಷ ಕೆಂಡಗಣ್ಣ ಆರಾಧ್ಯ ಇತರರಿದ್ದರು. 

Leave a Reply

Your email address will not be published. Required fields are marked *