ಕೆಂಪೇಗೌಡ ಏರ್ಪೋರ್ಟ್​​ನಿಂದ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದ ಅನಿಲ್‌ ಕುಂಬ್ಳೆ

Anil Kumble traveled to Bangalore from Kempegowda Airport
Published on

ಬೆಂಗಳೂರು: ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಅವರು ಕೆಂಪೇಗೌಡ ಏರ್ಪೋರ್ಟ್​​ನಿಂದ ಬೆಂಗಳೂರಿಗೆ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.

ಅನಿಲ್ ಕುಂಬ್ಳೆ ಅವರಿಗೂ ಬಂದ್ ಬಿಸಿ ತಟ್ಟಿದ್ದು, ಏರ್‌ಪೋರ್ಟ್ ಟ್ಯಾಕ್ಸಿ‌ ಇಲ್ಲದೇ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ಮನೆಗೆ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಕುರಿತಾಗಿ ಅವರೇ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಂದು ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್​​ ಮೂಲಕವಾಗಿ ಮನೆಗೆ ಪ್ರಯಾಣಿಸಿದೆ ಎಂದು ಬರೆದುಕೊಂಡು ಬಸ್​ನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಟ್ವೀಟ್​​ ಮಾಡಿದ್ದಾರೆ.  ಈ ಫೋಟೋ ನೋಡಿದ ನೆಟ್ಟಿಗರು ಅನಿಲ್ ಕುಂಬ್ಳೆ ಅವರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net