

ಉಡುಪಿ: ಮೊಬೈಲ್ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ಭಾನುಬಾರ ರಾತ್ರಿ ಸಂಭವಿಸಿದೆ.
ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ.
ಈತ ಮನೆಯ ಹೊರೆಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾನೆ.
ಪ್ರಮೋದ್ ಬಡಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸೌಮ್ಯ ಸ್ವಭಾವದ ಈತ ವಾಲಿಬಾಲ್ ಮತ್ತಿತರ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದ. ಇಬ್ಬರು ಸಹೋದರರನ್ನು ಅಗಲಿದ್ದಾನೆ. ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಕುಟುಂಬದವರು ಶೋಕಸಾಗರದಲ್ಲಿ ಮುಳುಗಿದ್ದಾರೆ.