ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು

officer
Published on

ಬೀದರ್‌: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ.

ಆನಂದ್(31) ಮೃತ ದುರ್ದೈವಿ. ಸಹಾಯಕ ಕೃಷಿ ಅಧಿಕಾರಿಯಾಗಿದ್ದ ಅವರು ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯಸಿರೆಳೆದಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. ವಿವಿಧ ರಾಜ್ಯಗಳ 174 ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಮತದಾನ ಪ್ರಾರಂಭವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net