ಲೋಕಸಭಾ ಚುನಾವಣೆ: ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಜ್ಯದ ಒಂದೂ ಹೆಸರಿಲ್ಲ!

bjp
Published on

ನವದೆಹಲಿ: ಲೋಕಸಭಾ ಸಮರಕ್ಕೆ ಭಾರತೀಯ ಜನತಾ ಪಕ್ಷ ಸಜ್ಜಾಗಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಕರ್ನಾಟಕದ ಒಬ್ಬ ಅಭ್ಯರ್ಥಿಯ ಹೆಸರೂ ಸಹ ಇಲ್ಲ ಎನ್ನಲಾಗಿದೆ. ಜೆಡಿಎಸ್​ ಜತೆಗಿನ ಮೈತ್ರಿ ಕಾರಣ ಪಟ್ಟಿಯಲ್ಲಿ ರಾಜ್ಯದ ಯಾವುದೇ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳನ್ನು ಫೈನಲ್​ ಮಾಡದ ಕಾರಣ ಹೀಗಾಗಿದೆ ಎನ್ನಲಾಗಿದೆ. ಇದು ತಮ್ಮ ಹೆಸರು ಘೋಷಣೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ.

ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ, ವಾರಣಾಸಿಯಿಂದ ಪ್ರಧಾನಿ ಮೋದಿ, ಗಾಂಧಿನಗರದಿಂದ ಅಮಿತ್ ಶಾ ಸ್ಪರ್ಧಿಸಲಿದ್ದಾರೆ.

ಪಕ್ಷದ ದೆಹಲಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು 195 ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದರು.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು. 28 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. 50 ವರ್ಷದೊಳಗಿನ 47 ಅಭ್ಯರ್ಥಿಗಳನ್ನು ಮಾಡಲಾಗಿದೆ. 47 ಯುವಕರಿಗೆ ಟಿಕೆಟ್ ನೀಡಲಾಗಿದೆ. 27 ಎಸ್ಸಿ, 18 ಎಸ್ಟಿ, 57 ಒಬಿಸಿಗೆ ಟಿಕೆಟ್ ನೀಡಲಾಗಿದೆ ಎಂದು ವಿವರಿಸಿದರು.

ಶನಿವಾರ ಸಂಜೆ 6.15ಕ್ಕೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ.

ದೆಹಲಿಯಲ್ಲಿ ಸತತ ಸಭೆಗಳನ್ನು ನಡೆಸಿದ ನಂತರ ಬಿಜೆಪಿ ಈ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ಸೇರಿದ್ದು, ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿದ್ದನ್ನು ಸ್ಮರಿಸಬಹುದು.

ಚುನಾವಣಾ ಆಯೋಗದ ವೇಳಾಪಟ್ಟಿ ಘೋಷಣೆಗೂ ಮೊದಲೇ ಲೋಕಸಭೆ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಹೆಸರಿಸಲು ಆಡಳಿತಾರೂಢ ಬಿಜೆಪಿ ಮುಂದಾಗಿದೆ.

ಭಾರತೀಯ ಜನತಾ ಪಕ್ಷ ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ಗುರಿ ಹೊಂದಿದೆ. ಇದಕ್ಕೂ ಮುನ್ನ ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಿಇಸಿ ಸಭೆಯಲ್ಲಿ ಉತ್ತರ ಪ್ರದೇಶದ 50 ಲೋಕಸಭಾ ಸ್ಥಾನಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ಝೀ ನ್ಯೂಸ್ ಟೆಲಿವಿಷನ್‌ಗೆ ತಿಳಿಸಿವೆ.

ಕರ್ನಾಟಕದ ಒಂದೂ ಹೆಸರಿಲ್ಲ: ಪಟ್ಟಿಯಲ್ಲಿ ಬಹುತೇಕ ಕೇಂದ್ರ ಸಚಿವರು ಸೇರಿದಂತೆ ಹಲವು ಪ್ರಮುಖರ ಹೆಸರಿದೆ. ಆದರೆ ಕರ್ನಾಟಕದ ಯಾವೊಬ್ಬ ಸಚಿವ, ಸಂಸದರಿಗೆ ಟಿಕೆಟ್​ ಘೋಷಣೆಯಾಗಿಲ್ಲ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net