

ಆರೋಗ್ಯದ ದೃಷ್ಟಿಯಿಂದ ನುಗ್ಗೆಯು ಬಹಳ ಒಳ್ಳೆಯದು.ಇದರಲ್ಲಿ ಕಬ್ಬಿಣಾಂಶ ಮತ್ತು ಕ್ಯಾಲ್ಷಿಯಂ ಅಧಿಕ ವಿರುವುದರಿಂದ ಮೂಳೆಗೆ ಹಾಗೂ ಅನೀಮಿಯ ಇರುವವರಿಗೆ ಇದು ಒಳ್ಳೆಯದು. ಇದು ಬ್ಲಡ್ ಶುಗರ್ ಹಾಗೂ ಕೊಲೆಸ್ಟ್ರಾಲನ್ನು ನಿಯಂತ್ರಣದಲ್ಲಿರಿಸುತ್ತದೆ. ಇಮ್ಯುನಿಟಿ ಜಾಸ್ತಿ ಮಾಡಲು ಇದು ಸಹಾಯಕ. ನುಗ್ಗೆಕಾಯಿ, ಹೂವು ಹಾಗೂ ಸೊಪ್ಪುಗಳನ್ನು ಬಳಸಿ ರುಚಿಯಾದ ಅಡುಗೆ ಮಾಡಬಹುದು.
ಬೇಕಾಗುವ ಸಾಮಗ್ರಿಗಳು: ನುಗ್ಗೆ ಹೂವು ಎರಡು ಕಪ್, ಬೇಯಿಸಿದ ಬಟಾಣಿ ಒಂದು ಕಪ್, ಒಂದು ಚಮಚ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಒಂದು ಚಮಚ ಗರಂ ಮಸಾಲ, ಅರ್ಧ ಚಮಚ ಕೊತ್ತಂಬರಿ ಪುಡಿ, ಅರ್ಧ ಚಮಚ ಜೀರಿಗೆ ಪುಡಿ, ಅರ್ಧ ಚಮಚ ಕೆಂಪುಮೆಣಸಿನ ಪುಡಿ, ಎರಡು ಈರುಳ್ಳಿ, ಎರಡು ಟೊಮ್ಯಾಟೋ, ಉಪ್ಪು ರುಚಿಗೆ ತಕ್ಕಷ್ಟು ಮಾಡುವ ವಿಧಾನ: ನುಗ್ಗೆಹೂವನ್ನು ಶುಚಿಗೊಳಿಸಿ ಮಿಕ್ಸಿಯಲ್ಲಿ ಸ್ವಲ್ಪ ಗ್ರೖೆಂಡ್ ಮಾಡಿ. ಈರುಳ್ಳಿ ಮತ್ತೆ ಟೊಮ್ಯಾಟೋವನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ ಈರುಳ್ಳಿಯನ್ನು ಕೆಂಪಗಾಗುವ ತನಕ ಹುರಿಯಿರಿ. ನಂತರ ಟೊಮ್ಯಾಟೋ ನುಗ್ಗೆ ಹೂವು ಮತ್ತೆ ಉಳಿದ ಎಲ್ಲಾ ಮಸಾಲೆಗಳನ್ನು ಹಾಕಿ ಒಂದು ನಿಮಿಷ ಹುರಿಯಿರಿ. ಒಂದು ಕಪ್ ನೀರನ್ನು ಹಾಕಿ ಬೇಯಿಸಿದ ಬಟಾಣಿಯನ್ನು ಹಾಕಿ ಐದು ನಿಮಿಷ ಕೈಯಾಡಿಸಿ.
| ಹರ್ಷಾ ಕಾಮತ್, ಕಾರ್ಕಳ