ಉಹಾಪೋಹ ಬೇಡ…ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ

kumaraswamy
Published on

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ಗೊಂದಲ ತೀವ್ರಗೊಂಡಿದೆ. ನಿನ್ನೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅದನ್ನು ಅಲ್ಲಗಳೆದಿದ್ದಾರೆ. ಮೈತ್ರಿ ಇನ್ನೂ ಅಂತಿಮಗೊಂಡಿಲ್ಲ. ಇನ್ನೂ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಎಚ್‌ಡಿ ಕುಮಾರಸ್ವಾಮಿ ಶನಿವಾರ ಹೇಳಿದರು.

ಸದ್ಯಕ್ಕೆ ಏನನ್ನೂ ಹೇಳಲಾರೆ...
ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಬಗ್ಗೆ ಸದ್ಯಕ್ಕೆ ಏನನ್ನೂ ಹೇಳಲಾರೆ. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ರಾಜ್ಯದಲ್ಲಿ ಬಿಜೆಪಿ ಬಲಗೊಳ್ಳಲಿದೆ ಎಂದು ಶುಕ್ರವಾರ ಹೇಳಿದ್ದಾರೆ. ಮಾಧ್ಯಮಗಳಲ್ಲಿ ವಿಷಯ ಗಮನಿಸುತ್ತಿದ್ದೇನೆ, ಯಡಿಯೂರಪ್ಪ ಅವರ ಹೇಳಿಕೆ ಗಮನಿಸಿದ್ದೇನೆ, ಅವರು ನಮ್ಮ ಬಗ್ಗೆ ಒಳ್ಳೆಯ ಮಾತನಾಡಿದ್ದಾರೆ. ನಾನು ಅವರಿಗೆ ಅಭಾರಿಯಾಗಿದ್ದೇನೆ. ಉಹಾಪೋಹ ಬೇಡ ಎಂದು ಎಚ್​​​ಡಿಕೆ ತಿಳಿಸಿದ್ದಾರೆ.

ಮೈತ್ರಿ ಕುರಿತು ಮಾತನಾಡಿದ ಯಡಿಯೂರಪ್ಪ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ. ಈ ಸಂಬಂಧ ನವದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದರು.

ಪೂಜೆ ಸಲ್ಲಿಕೆ
'ನಾನು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದೇನೆ. ನನ್ನ ತಂದೆಗೆ (ಎಚ್‌.ಡಿ. ದೇವೇಗೌಡರಿಗೆ) ಆರೋಗ್ಯ ಕೋರಿ ಪೂಜೆ ಸಲ್ಲಿಸಲಾಗಿದೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಘೋಷಣೆಗೂ ಮುನ್ನ ದೇವೇಗೌಡರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಭಾನುವಾರ ಜೆಡಿಎಸ್‌ನ ಬೃಹತ್ ಸಮಾವೇಶ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net