ಜನಮತ | ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಿ

Janamatha
Published on

ರಾಜ್ಯ ಸರ್ಕಾರ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ, ಉತ್ಪಾದಕತೆ ಹೆಚ್ಚಿಸಲು ಹಣ ವ್ಯಯಿಸಲಿ. ಸರ್ಕಾರಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಜಾರಿಯಲ್ಲಾಗುವ ಲೋಪವನ್ನು ಗುರುತಿಸಿ ಸರಿಪಡಿಸಲಿ. ಸರ್ಕಾರಿ ಕಚೇರಿಗಳಲ್ಲಿಯ ಸಾರ್ವಜನಿಕರ ಕೆಲಸ ನಿಗದಿತ ಸಮಯದಲ್ಲಿ ಆಗುವಂತೆ ಮಾಡಬೇಕು. ಪರಿಣಾಮಕಾರಿ ಆಡಳಿತ ಜಾರಿಗಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಂಟ್ರೋಲ್ ರೂಂ ವ್ಯವಸ್ಥೆಯಾಗಿ, ಆ ಕಾರ್ಯ ನೋಡಿಕೊಳ್ಳಲು ಅಧಿಕಾರಿಯೊಬ್ಬರನ್ನು ನೇಮಿಸಬೇಕು. ಸಮಯಕ್ಕೆ ಸರಿಯಾಗಿ ನಾಗರಿಕರಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು.

ಸೌರ ವಿದ್ಯುತ್ ದೀಪ ಬಳಕೆ ಮತ್ತು ಬ್ಯಾಟರಿಚಾಲಿತ ವಾಹನ ಬಳಕೆ ಹೆಚ್ಚಿಸಲು ಅವುಗಳ ಬೆಲೆ ಕಡಿಮೆ ಮಾಡಬೇಕು. ಇದಕ್ಕಾಗಿ ತೆರಿಗೆ ಇಳಿಸುವಿಕೆ ಹಾಗೂ ಸಹಾಯಧನದಂಥ ಕ್ರಮಗಳು ಅಗತ್ಯ. ಗ್ರಾಮೀಣ ಭಾಗಗಳಲ್ಲಿ ವಿದ್ಯುತ್, ಶುದ್ಧ ಕುಡಿಯುವ ನೀರು, ರಸ್ತೆ ಮೊದಲಾದ ಮೂಲಸೌಕರ್ಯಗಳನ್ನು ಒದಗಿಸಬೇಕು. ಗ್ರಾಮೀಣ ಕಸುಬುಗಳನ್ನು ಉತ್ತೇಜಿಸಬೇಕು. ಅಗತ್ಯ ಮೂಲಸೌಕರ್ಯಗಳ ಜೊತೆಗೆ ಸ್ಥಳೀಯ ಉತ್ಪನ್ನಗಳಿಗೆ ಆರ್ಥಿಕ ನೆರವು, ಮಾರುಕಟ್ಟೆ ಸೌಲಭ್ಯ ಒದಗಿಸಬೇಕು. ಆಗ ಆರ್ಥಿಕ ಚಟುವಟಿಕೆಗಳು ವೇಗ ಪಡೆದು, ಸುಧಾರಣೆಯ ದಾರಿ ತೆರೆದುಕೊಳ್ಳಲು ಸಾಧ್ಯ.

| ಉದಯ ಮ. ಯಂಡಿಗೇರಿ ಧಾರವಾಡ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net