ಜನಮತ | ತಮಿಳುನಾಡು ವಿಧಾನಸಭೆಯ ಮಾದರಿ ನಡೆ

tamil_nadu_assembly
Published on
ಸರ್ಕಾರಿ ಶಾಲೆಯಲ್ಲಿ ಕಲಿತು ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಶೇ.7.5ರಷ್ಟು ಮೀಸಲು ನೀಡುವ ತಮಿಳುನಾಡು ವಿಧಾನಸಭೆಯ ವಿಧೇಯಕಕ್ಕೆ ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ ಅಂಕಿತ ಹಾಕಿರುವುದರಿಂದ 2020-21ರ ಶೈಕ್ಷಣಿಕ ವರ್ಷದಿಂದಲೇ ತಮಿಳುನಾಡಿನಲ್ಲಿ ಈ ಮಸೂದೆ ಜಾರಿಗೆ ಬರಲಿದೆ. ರಾಜ್ಯ ವಿಧಾನಸಭೆಯಲ್ಲಿ ಸೆಪ್ಟೆಂಬರ್ 15ರಂದೇ ವಿಧೇಯಕ ಸರ್ವಾನುಮತದಿಂದ ಅಂಗೀಕಾರವಾಗಿದ್ದರೂ ರಾಜ್ಯಪಾಲರು ಅಂಕಿತ ಹಾಕಿರಲಿಲ್ಲ.

‘ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುವಲ್ಲಿ ವಿಫಲವಾಗಿದೆ’ ಎಂದು ಡಿಎಂಕೆ ಸ್ಟಾಲಿನ್ ನೇತೃತ್ವದಲ್ಲಿ ಧರಣಿ ನಡೆಸಿತ್ತು. ಆಗ ಸರ್ಕಾರ ಈ ಕುರಿತು ಸುಗ್ರೀವಾಜ್ಞೆ ಹೊರಡಿಸಿತು. ಬಳಿಕ ಅಕ್ಟೋಬರ್ 29ರಂದು ರಾಜ್ಯಪಾಲರು ಈ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಇನ್ನು ಮುಂದೆ ತಮಿಳುನಾಡಿನ ಸರ್ಕಾರಿ ಶಾಲೆಗಳಲ್ಲಿ ಓದಿ ನೀಟ್ ಪಾಸಾದ ವಿದ್ಯಾರ್ಥಿಗಳು ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯುತ್ತಾರೆ.

ಬಡವರು ವೈದ್ಯಕೀಯ ಪದವಿ ಪಡೆಯುವುದು ಗಗನಕುಸುಮವಾಗಿರುವ ಇಂದಿನ ಸನ್ನಿವೇಶದಲ್ಲಿ ತಮಿಳುನಾಡು ಸರ್ಕಾರದ ಈ ನಡೆ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಪಕ್ಷಬೇಧ, ಜಾತಿಬೇಧ ಬದಿಗಿಟ್ಟು ತಮಿಳುನಾಡು ವಿಧಾನಸಭೆಯ ಎಲ್ಲ ಶಾಸಕರು ಒಟ್ಟಾಗಿ ಮಸೂದೆ ಬೆಂಬಲಿಸಿರುವುದು ವಿಶೇಷವಾಗಿದೆ.

| ಪಂಪಾಪತಿ ಹಿರೇಮಠ್, ನಿವೃತ್ತ ಬ್ಯಾಂಕ್ ಅಧಿಕಾರಿ ಧಾರವಾಡ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net