ಜನಮತ: ಸಮರ್ಪಕ ವಿದ್ಯುತ್ ಪೂರೈಕೆಯಾಗಲಿ

electricity grid
Published on

ಮುಂಗಾರು ಮಳೆಯ ಕೃಪೆಯಿಂದ ನದಿಗಳು, ಜಲಾಶಯಗಳು ಮೈದುಂಬಿ ಹರಿಯುತ್ತಿದ್ದರೂ ರಾಜ್ಯದಲ್ಲಿ ವಿದ್ಯುತ್ ಅಭಾವ ಮಾತ್ರ ತಪ್ಪಿಲ್ಲ ಎಂಬುದು ವಿಷಾದನೀಯ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಅಸಮರ್ಪಕ ವಿದ್ಯುತ್ ಪೂರೈಕೆ ಬಗ್ಗೆ ಇಂಧನ ಇಲಾಖೆಯ ಗಮನ ಸೆಳೆದಿದ್ದಾರೆ.

ಕರ್ನಾಟಕದ ಏಳು ಜಿಲ್ಲೆಗಳ ರೈತರಿಗೆ ಮಾತ್ರ 7 ಗಂಟೆ ಕಾಲ ಥ್ರೀ ಫೇಸ್ ವಿದ್ಯುತ್ ಸರಬರಾಜು ಆಗುತ್ತಿದೆ. ಉಳಿದ ಜಿಲ್ಲೆಗಳ ರೈತರಿಗೆ ಕೇವಲ 3 ಗಂಟೆ ಥ್ರೀ ಫೇಸ್ ವಿದ್ಯುತ್ ಲಭ್ಯವಾಗುತ್ತಿದೆ. ಇದಕ್ಕೆ ಕಾರಣ ಏನು ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಅಧಿಕಾರಿಗಳಲ್ಲಿ ಸಮರ್ಪಕ ಉತ್ತರವಿಲ್ಲ. ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಆಗುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಕಳ್ಳತನ ತಡೆಗಟ್ಟಲು ಆಗುತ್ತಿಲ್ಲ. ಕಳಪೆ ಟಿಸಿ ಕೆಬಲ್​ಗಳ ಬಳಕೆಯಿಂದ ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇಂಥ ಸ್ಥಿತಿಯಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದಾದರೂ ಹೇಗೆ? ಕೃಷಿ ಪಂಪ್​ಸೆಟ್​ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಆಗುವಂತೆ ನೋಡಿಕೊಳ್ಳಬೇಕು.

| ವಿ.ಜಿ. ಇನಾಮದಾರ ಸಾರವಾಡ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net