"ಕೈ"ಸೇರ್ಪಡೆಯಾದ ಮಾಜಿ ಶಾಸಕ‌ ಎಸ್.ಶಫಿಅಹ್ಮದ್

kpcc
Published on

ಬೆಂಗಳೂರು: ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್.ಶಫಿ ಅಹ್ಮದ್ ಸೇರಿದಂತೆ ಹಲವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್​ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಕಾಂಗ್ರೆಸ್ ತತ್ವ, ಸಿದ್ದಾಂತದಲ್ಲಿ ನಂಬಿಕೆಯಿಟ್ಟು ಬರುವವರಿಗೆ ಸ್ವಾಗತವಿದೆ. ಇದೊಂದು ವಿಶೇಷವಾದ ಸಂದರ್ಭ. ವಿಜಯದಶಮಿಯಂದು ಜನತಾದಳದಿಂದ ಸಾವಿರಾರು ಕಾರ್ಯಕರ್ತರು ಹಾಗೂ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದರು.

ಎಂ.ಶ್ರೀಕಾಂತ್ ನನ್ನ ಗೆಳೆಯ ಹಾಗೂ ಸಂಘಟನಾಗಾರ. ನಾಯಕರನ್ನು ಸೃಷ್ಟಿ ಮಾಡುವ ಶಕ್ತಿ ಅವರಲ್ಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಇಂತಹ ನಾಯಕ ಅಗತ್ಯವಿದೆ. ಶಿವಮೊಗ್ಗ ಜಿಲ್ಲೆಯ ನಾಯಕರು ಹಾಗೂ ಯಶವಂತಪುರ ಕ್ಷೇತ್ರದ ನಾಯಕರು ಪಕ್ಷ ಸೇರ್ಪಡೆ ಬಲವರ್ಧನೆಗೆ ಅನುಕೂಲವಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net