ಏ.20ಕ್ಕೆ ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಬೆಂಗಳೂರು, ಚಿಕ್ಕಬಳ್ಳಾಪುರದ ಬಿಜೆಪಿ ಸಮಾವೇಶಗಳಲ್ಲಿ ಭಾಗಿ..

modi
Published on

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಕರೆಸಲು ತೀರ್ಮಾನಿಸಿದ್ದಾರೆ.

ಮೈಸೂರು ಮತ್ತು ಮಂಗಳೂರಿಗೆ ಕಳೆದ ಭಾನುವಾರ ಭೇಟಿ ನೀಡಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರು ಏ. 20ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.​ಡಿ. ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಒಂದೇ ದಿನ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net