ಪ್ರಜ್ವಲ್ ಕೇಳಿದ್ದ ಕಾಲಾವಕಾಶ ಅಂತ್ಯ..ಏರ್‌ಪೋರ್ಟ್‌ಗಳಲ್ಲಿ ಎಸ್‌ಐಟಿ ನಿಗಾ!

prajwal
Published on

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಒಳಗಾಗಬೇಕಿದ್ದು, ಅವರು ಕೇಳಿದ್ದ ಕಾಲಾವಕಾಶ ಇಂದಿಗೆ(ಮೇ 8) ಮುಕ್ತಾಯವಾಗಿದೆ. ವಿದೇಶದಲ್ಲಿರುವ ಪ್ರಜ್ವಲ್ ಭಾರತಕ್ಕೆ ಆಗಮಿಸುವ ಸಾಧ್ಯತೆ ಇರುವುದರಿಂದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಎಸ್‌ಐಟಿ ಅಧಿಕಾರಿಗಳು ನಿಗಾವಹಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಜ್ವಲ್ ವಿದೇಶಕ್ಕೆ ಹಾರಿದ್ದರು. ಪ್ರಕರಣ ತನಿಖೆಯನ್ನು ಎಸ್‌ಐಟಿಗೆ ವಹಿಸಿದ ಬಳಿಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ತಾನು ವಿದೇಶದಲ್ಲಿದ್ದು, ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ಬೇಕು ಎಂದು ಪ್ರಜ್ವಲ್ ಪತ್ರ ಬರೆದಿದ್ದರು.

ತನ್ನ ವಕೀಲರ ಮೂಲಕ ಎಸ್‌ಐಟಿ ಅಧಿಕಾರಿಗಳಿಗೆ ಪ್ರಜ್ವಲ್ ಉತ್ತರ ತಲುಪಿಸಿದ್ದರು. ಅದಾದ ನಂತರವೂ ಸತತವಾಗಿ ಮೂರು ಬಾರಿ ಎಸ್‌ಐಟಿ ನೋಟಿಸ್ ನೀಡಿತ್ತು. ನಾಲ್ಕನೇ ಬಾರಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ.

ಕಳೆದ ಮೂರು ದಿನಗಳಿಂದ ದೇಶದ ಎಲ್ಲ ಏರ್‌ಪೋರ್ಟ್‌ಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಒಂದು ವಾರದ ಕಾಲಾವಕಾಶ ಹಾಗೂ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಪ್ರಜ್ವಲ್ ಭಾರತಕ್ಕೆ ಮರಳುವ ಸಾಧ್ಯತೆ ಇದೆ. ಈ ಹಿನ್ನಲೆ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net