

ಚಿತ್ರದುರ್ಗ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಕುಟುಂಬ ಸದಸ್ಯರು ಸಲಹೆ ನೀಡಿದ್ದಾರೆ. ಅದರಂತೆ, ನಾನು ಹೈಕಮಾಂಡ್ಗೆ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಕುಟುಂಬಸ್ಥರು ಮತ್ತೊಂದು ಕ್ಷೇತ್ರದಿಂದ ಸ್ಪರ್ದಿಸುವಂತೆ ಹೇಳಿರುವುದಾಗಿ ತಿಳಿಸಿದ್ದಾರೆ.
ರಾಜ್ಯದ 25 ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ ಹಾಗೆಂದ ಮಾತ್ರಕ್ಕೆ ಎಲ್ಲಾ ಕಡೆ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾ ಕ್ಷೇತ್ರದಿಂದ ಟಿಕೆಟ್ ಅಂತಿಮಗೊಳಿಸುವಂತೆ ಹೈಕಮಾಂಡ್ಗೆ ಹೇಳಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ: 4.5 ಲಕ್ಷ ರೂ.ಗೆ ನವಜಾತ ಶಿಶುವನ್ನು ಮಾರಾಟ ಮಾಡಿದ ತಾಯಿ, 11 ಮಂದಿ ಅರೆಸ್ಟ್