ಜನಮತ| ಉತ್ತಮ ಆಡಳಿತದತ್ತ ಸಾಗಲಿ ಬಿಹಾರ

janamata
Published on

ಮತದಾನ ಮುಗಿದು, ಮತಎಣಿಕೆ ಹೊತ್ತಲ್ಲೂ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟ ಬಿಹಾರದಲ್ಲಿ ಎನ್​ಡಿಎ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಮರಳಿದೆ. ಜೆಡಿಯು ಬಿಜೆಪಿಗಿಂತ ಕಡಿಮೆ ಸ್ಥಾನ ಪಡೆದಿದ್ದರೂ, ನಿತೀಶ್​ಕುಮಾರ್ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಹಾರದಲ್ಲಿ ಈ ಬಾರಿ ಪುರುಷರಿಗಿಂತಲೂ ಮಹಿಳೆಯರು ಮತದಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಹಾಗಾಗಿ, ಹೊಸ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈಗಲೂ ಅಲ್ಲಿನ ಹಳ್ಳಿಗಳು ಶೋಚನೀಯ ಸ್ಥಿತಿಯಲ್ಲಿದ್ದು, ಮೂಲಸೌಕರ್ಯಗಳಿಗಾಗಿ ಪರದಾಡುತ್ತಿವೆ. ಗ್ರಾಮಗಳ ಅಭ್ಯುದಯಕ್ಕೆಂದೇ ವಿಶೇಷ ಯೋಜನೆ ರೂಪಿಸಿ, ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಅಭಿವೃದ್ಧಿಯೇ ಮೊದಲ ಆದ್ಯತೆಯಾಗಿ, ಉತ್ತಮ ಆಡಳಿತದತ್ತ ಬಿಹಾರ ದಾಪುಗಾಲು ಇಡಬೇಕು. ಈ ಆಶಯವನ್ನು ಮೈತ್ರಿ ಸರ್ಕಾರ ಅರ್ಥ ಮಾಡಿಕೊಂಡು ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ, ನಗರಾಭಿವೃದ್ಧಿ ಸೇರಿ ಎಲ್ಲ ರಂಗಗಳಲ್ಲೂ ಮಹತ್ವದ ಸುಧಾರಣೆಗಳನ್ನು ಸಾಕಾರಗೊಳಿಸಲಿ.

| ರವಿ ಮಂಗಳೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net