More

    ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ: 5 ಕೆಜಿ ಅಕ್ಕಿ ಜತೆ ಖಾತೆಗೆ ಜಮಾ ಆಗಲಿದೆ ಹಣ

    ಬೆಂಗಳೂರು: ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. ಪಡಿತರ ಚೀಟಿ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ. ಯಾರು ಖಾತೆ ತೆರೆದಿಲ್ಲವೋ ಅಂತಹವರು ಬ್ಯಾಂಕ್ ಖಾತೆ ತೆರೆಯಬೇಕಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್​.ಮುನಿಯಪ್ಪ ತಿಳಿಸಿದ್ದಾರೆ.

    ಅಕ್ಕಿ‌ ದಾಸ್ತಾನು ಸಂಗ್ರಹವಾಗುವವರೆಗೂ ಮಾತ್ರ ಹಣ ನೀಡುತ್ತೇವೆ. ಕೆಜಿಗೆ 34 ರೂಪಾಯಿಯಂತೆ ಹಣ ನೀಡಲಾಗುವುದು. ಎಷ್ಟು ತಿಂಗಳು ಅಕ್ಕಿ ಬದಲಿಗೆ ಹಣ ನೀಡಲಾಗುವುದು ಎಂಬುದನ್ನ ಹೇಳೋದಿಲ್ಲ. ಇದು ಅಕ್ಕಿ ಪೂರೈಕೆಯಾಗದ ಕಾರಣ ಹಣ ನೀಡುವುದು ತಾತ್ಕಾಲಿಕ ಮಾತ್ರ.

    90% ಅಕೌಂಟ್ ಇರುವ ಬಗ್ಗೆ ಮಾಹಿತಿ ಇದೆ. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ವರ್ಗಾವಣೆಯಾಗಲಿದೆ. ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ರಾಗಿ ಕೊಡುತ್ತೇವೆ. ಉತ್ತರ ಕರ್ನಾಟಕ ಭಾಗಕ್ಕೆ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ ಎಂದಿದ್ದಾರೆ.

    ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿ ಆಗುತ್ತೆ. ಕೇಂದ್ರ ಸರ್ಕಾರ ಮನಸ್ಸು ಬದಲಾಯಿಸಿ ಅಕ್ಕಿ ಕೊಟ್ರೆ‌ ಹಂಚಿಕೆ ಮಾಡುತ್ತೇವೆ. ಕೇಂದ್ರದ ಬಳಿ ಅಕ್ಕಿ ದಾಸ್ತಾನು ಇದೆ. ಇಲ್ಲವೆ ಟೆಂಡರ್ ಕರೆದು ಅಕ್ಕಿ ಖರೀದಿ ಮಾಡುತ್ತೇವೆ. ಹಣ ರೆಡಿ ಇದೆ, ಅಕೌಂಟ್​ಗೆ ವರ್ಗಾವಣೆ ಆಗಲಿದೆ. ನಾಳೆಯಿಂದನೆ ಅಕೌಂಟ್​​ಗೆ ಹಣ ಹೋಗಲಿದೆ.‌ಅನ್ನಭಾಗ್ಯ ಯೋಜನೆಗೆ ಸಮಾವೇಶ ನಡೆಸುವ ಅವಶ್ಯಕತೆ ಇಲ್ಲ.

    ರಾಜ್ಯದಲ್ಲಿ ಪಡಿತರ ಕಾರ್ಡ್ ಹೊಂದಿರುವವರ ಮಾಹಿತಿ:

    – ರಾಜ್ಯದಲ್ಲಿ ಒಟ್ಟು 1 ಕೋಟಿ 28 ಲಕ್ಷ ಕಾರ್ಡ್‌ದಾರರು
    – ಒಟ್ಟು 1 ಕೋಟಿ 28 ಲಕ್ಷ ಕಾರ್ಡ್‌ದಾರರಲ್ಲಿ 4 ಕೋಟಿ 42 ಲಕ್ಷ ಫಲಾನುಭವಿಗಳು
    – 1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಕಾರ್ಡ್ ಜೋಡಣೆ ಆಗಿದೆ
    – 1.22 ಕಾರ್ಡ್‌ದಾರರ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ
    – ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‌ಗಳು ಆಧಾರ್ ಲಿಂಕ್ ಆಗಬೇಕು
    – ಆಧಾರ್ ಲಿಂಕ್ ಆಗ್ತಿದ್ದ ಹಾಗೆ ಬ್ಯಾಂಕ್ ಅಕೌಂಟ್ ಕೂಡ ಕಾರ್ಡ್ ಗಳಿಗೆ ಅಪ್ ಡೇಟ್ ಆಗಲಿದೆ

    ನಟಿ ಹರ್ಷಿಕಾ ಪೂಣಚ್ಚ- ಭುವನ್ ಮದುವೆ ಫಿಕ್ಸ್; ಕೊಡವರ ಸಂಪ್ರದಾಯದಂತೆ ಆಗಸ್ಟ್ 24 ರಂದು ನಡೆಯಲಿದೆ ವಿವಾಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts