ಅನಾರೋಗ್ಯಕ್ಕೀಡಾದ ಅಣ್ಣಾ ಹಜಾರೆ: ಐಸಿಯುನಲ್ಲಿ ಚಿಕಿತ್ಸೆ

ರಾಳೆಗಣ​ ಸಿದ್ದಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕ್​ಪಾಲ್​ ಮಸೂದೆ ಜಾರಿಗೆ ಆಗ್ರಹಿಸಿ ಅಣ್ಣಾ ಹಜಾರೆ ಇತ್ತೀಚೆಗೆ ತಮ್ಮ ಸ್ವಗ್ರಾಮ ರಾಳೆಗಣ ಸಿದ್ದಿಯಲ್ಲಿ ಏಳುದಿನಗಳ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಇದರಿಂದಾಗಿ ಅವರ ಆರೋಗ್ಯ ತುಂಬ ಹದಗೆಟ್ಟಿದೆ. ನಡೆದಾಡಲೂ ಕಷ್ಟಪಡುತ್ತಿದ್ದಾರೆ. ಮಹಾರಾಷ್ಟ್ರದ ಅಹಮದ್​ನಗರದ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಶುಕ್ರವಾರದ ಬಳಿಕ ಅವರನ್ನು ಡಿಸ್​ಚಾರ್ಜ್​ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಅಣ್ಣಾ ಬೆಂಬಲಿಗ ಸಂಜಯ್​ ಪಾದಡೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *