More

    ಅನ್ನಭಾಗ್ಯದಲ್ಲೂ ಐದು ಕೆ.ಜಿ. ಹೆಚ್ಚಳ; ನೂತನ ಸರ್ಕಾರದಿಂದ ಆದೇಶ

    ಬೆಂಗಳೂರು: ಕಾಂಗ್ರೆಸ್​ನ ಸಿದ್ದರಾಮಯ್ಯ ನೇತೃತ್ವದ ನತನ ಸರ್ಕಾರ ಇಂದು ಅಸ್ತಿತ್ವಕ್ಕೆ ಬರುತ್ತಿದ್ದಂತೆ ಚುನಾವಣಾಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರುವಲ್ಲಿ ಆದೇಶ ಮಾಡಿದ್ದು, ಅನ್ನಭಾಗ್ಯದಲ್ಲೂ ಐದು ಕಿಲೋಗ್ರಾಂ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

    ಇದನ್ನೂ ಓದಿ: ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!

    ಇಂದು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸಚಿವ ಸಂಪುಟವು ಪ್ರಸ್ತುತ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾಗುತ್ತಿರುವ ಆಹಾರ ಧಾನ್ಯಗಳನ್ನು 05 ಕೆ.ಜಿ.ಯಿಂದ 10 ಕೆ.ಜಿ.ಗೆ ಹೆಚ್ಚಿಸಲು ಆದೇಶ ಮಾಡಿದೆ.

    ಇದನ್ನೂ ಓದಿ: ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್​ ಅಹಮದ್​!

    ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಒಟ್ಟು 10 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ತಾತ್ವಿಕವಾಗಿ ಆದೇಶಿಸಲಾಗಿದೆ. ಆಹಾರ ಧಾನ್ಯಗಳ ಹಂಚಿಕೆಗೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿಗಳನ್ನು ತದನಂತರ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ‘ಗೃಹಜ್ಯೋತಿ’ಯೂ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಖಚಿತ ಎಂದು ಸರ್ಕಾರಿ ಆದೇಶ

    ಬಂಕ್​ನಲ್ಲಿ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಧಗ್ಗನೆ ಹೊತ್ತಿಕೊಂಡ ಬೆಂಕಿ: ಪುತ್ರಿ ಸಾವು, ತಾಯಿ ಪರಿಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts