More

    ಅನ್ನಭಾಗ್ಯದ ಅಕ್ಕಿ ಕೇಂದ್ರ ಸರ್ಕಾರದು

    ಎನ್.ಆರ್.ಪುರ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಪ್ರತಿ ತಿಂಗಳೂ 22 ಲಕ್ಷ ಕ್ವಿಂಟಾಲ್ ಅಕ್ಕಿ ನೀಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಡವರಿಗೆ ನಾನು ಅನ್ನ ಭಾಗ್ಯ ನೀಡಿದ್ದೇನೆ ಎನ್ನುತ್ತಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

    ಮಂಗಳವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ಭವಿಷ್ಯ ನಿರ್ಧರಿಸಲಿದೆ. ಕಾಂಗ್ರೆಸ್ ನಾಯಕರು ಗ್ಯಾರಂಟಿ ಭರವಸೆ ಈಡೇರಿಸಿದ್ದೇವೆ ಎನ್ನುತ್ತಾರೆ. ಆದರೆ ರಾಜ್ಯ ಉಗ್ರರಿಗೆ ಸ್ವರ್ಗವಾದಂತಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸಿದ್ದಾರೆ. ಅಂಗಡಿಯಲ್ಲಿ ಹಿಂದು ಭಕ್ತಿ ಗೀತೆ ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಹೀಗಿರುವಾಗ ಮನುಷ್ಯರ ಜೀವಕ್ಕೆ ಯಾರು ಗ್ಯಾರಂಟಿ ನೀಡುತ್ತಾರೆ? ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಹೇಳಿದರು.
    ಮಾಜಿ ಸಚಿವ ಡಿ.ಎನ್.ಜೀವರಾಜ್ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿ ಮುಜರಾಯಿ ಮಂತ್ರಿಯಾಗಿದ್ದಾಗ ಮಾದರಿಯಾಗಯವಂಥ ಕೆಲಸ ಮಾಡಿದ್ದಾರೆ. ದೇವಸ್ಥಾನದ ಹಣವನ್ನು ಮಸೀದಿಗೆ ನೀಡುತ್ತಿರುವುದನ್ನು ತಪ್ಪಿಸಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಸರ್ವಸಮ್ಮತ ಅಭ್ಯರ್ಥಿಯಾಗಿದ್ದಾರೆ. ಬಡ ಕುಟುಂಬದಿಂದ ಬಂದಿರುವುದರಿಂದ ಬಡವರ ಕಷ್ಟ ಅರಿತಿದ್ದಾರೆ. ಅವರು ಗೆದ್ದರೆ ಕೇಂದ್ರದಲ್ಲಿ ಮಂತ್ರಿಯಾಗಲಿದ್ದಾರೆ ಎಂದು ಹೇಳಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿ ಎಂದು ಘೋಷಣೆ ಆದ ತಕ್ಷಣ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿದೆ. ಶೃಂಗೇರಿ, ಕೊಪ್ಪ, ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಪ್ರತಿ ಕಾರ್ಯಕರ್ತನೂ ಗೆಲುವಿಗಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
    ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್, ಮುಖಂಡರಾದ ಕಲ್ಮರುಡಪ್ಪ, ಬಿ.ಕೆ.ಗಣೇಶರಾವ್, ರಾಮಸ್ವಾಮಿ, ಶೃಂಗೇರಿ ಶಿವಣ್ಣ, ಭಾಸ್ಕರ್ ವೆನಿಲ್ಲಾ, ಪುಣ್ಯಪಾಲ್, ರಶ್ಮಿ ದಯಾನಂದ್, ಕೆಸವಿ ಮಂಜುನಾಥ್, ಪುತ್ತೂರು ವಿಕಾಸ್, ಎಚ್.ಡಿ.ಲೋಕೇಶ್, ಎ.ಬಿ.ಮಂಜುವಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts