ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಆರೋಪ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Congress
Published on

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಣೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಳಗ್ಗಿನಿಂದಲೇ ನಿರಂತರ ಮಳೆಯ ನಡುವೆಯೂ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರುಗಳು ಪ್ರತಿಭಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಮಳೆಯ ನಡುವೆಯೂ ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು, ಭಿತ್ರ ಪತ್ರ ಪ್ರದರ್ಶಿಸುತ್ತಾ, ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೇವೆ ಎಂದವರು ಈಗ ನೀತಿ ಬದಲಾಗಿದೆ ಎನ್ನುತ್ತಿದ್ದಾರೆ. ಬಿಎಸ್​ವೈ ಒಂದು ಕಾಳು ಅಕ್ಕಿ ಕಾಳು ಕಡಿಮೆ ಕೊಟ್ಟರೂ ಜನ ಪಡೆಯಬಾರದು ಎನ್ನುತ್ತಾರೆ. ಮೋದಿ ಹೇಳಿದ ಹದಿನೈದು ಲಕ್ಷ ರೂ. ಮೊದಲು ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಕುತಂತ್ರ ರಾಜಕೀಯ ಮಾಡುತ್ತಿದೆ. ಬಿಜೆಪಿಗರು ಹುಟ್ಟು ಕುತಂತ್ರಿಗಳಾಗಿದ್ದು, ನಮಗೆ ಅಕ್ಕಿ ಸಿಗದಂತೆ ಮಾಡುತ್ತಿದ್ದಾರೆ. ಅವರು ಏನೆ ಕುತಂತ್ರ ಮಾಡಿದರೂ ಯೋಜನೆ ಜಾರಿ‌ ಮಾಡುತ್ತೇವೆ. ನಮ್ಮ ಯೋಜನೆಗಳ ಬಗ್ಗೆ ‌ಮಾತನಾಡಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net