More

    ಸ್ವಾಮಿತ್ವಕ್ಕೆ ಗೌರವ ತಂದ ಅನ್ನದಾನೀಶ್ವರರು

    ಮುಂಡರಗಿ: ನಡೆ-ನುಡಿ ಒಂದಾಗಿಸಿಕೊಂಡು ಸ್ವಾಮಿತ್ವಕ್ಕೆ ಗೌರವ ತಂದವರು ಡಾ. ಅನ್ನದಾನೀಶ್ವರ ಸ್ವಾಮೀಜಿಯವರು ಎಂದು ಧಾರವಾಡ ಶ್ರೀ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

    ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಜಗದ್ಗುರು ಅನ್ನದಾನೀಶ್ವರ ಪ್ರತಿಷ್ಠಾನ ಪುರಸ್ಕಾರ, ಅನ್ನದಾನೀಶ್ವರ ವಿದ್ಯಾ ಸಮಿತಿ ಸಿಬ್ಬಂದಿ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಜಗತ್ತಿನಲ್ಲೇ ಜ್ಞಾನ ಮತ್ತು ಕೌಶಲದಲ್ಲಿ ಭಾರತ ನಂ.1 ರಾಷ್ಟ್ರವಾಗಬೇಕೆಂಬ ಉದ್ದೇಶದಿಂದ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೂರ್ವ ಸಿದ್ಧತೆ ನಡೆಯುತ್ತಿದೆ. ಶಾಲೆ- ಕಾಲೇಜ್​ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ತುಂಬಿಕೊಳ್ಳಲು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮಾರ್ಚ್ 1 ಮತ್ತು 2ರಂದು ಧಾರವಾಡದಲ್ಲಿ ಕಡತ ವಿಲೇವಾರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.

    ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿಗೆ ಜಗದ್ಗುರು ಅನ್ನದಾನೀಶ್ವರ ಪ್ರತಿಷ್ಠಾನ ಪುರಸ್ಕಾರ ನೀಡಿ ಗೌರವಿಸಲಾಯಿತು. ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಾ. ಗುರುದೇವಿ ಹುಲೆಪ್ಪನವರಮಠ ಮಾತನಾಡಿದರು. ಸಂಸ್ಥೆಯ ನಿವೃತ್ತ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಶ್ರೇಯಾ ಜೋಶಿ ಭರತ ನಾಟ್ಯ ಪ್ರದರ್ಶಿಸಿದರು. ಅಕ್ಷತಾ ಬಣ್ಣದಬಾವಿ, ನಾಗಭೂಷಣ ಹಿರೇಮಠ ಹಾಗೂ ಸಂಗಡಿಗರು ಸಂಗೀತ ಸೇವೆ ಸಲ್ಲಿಸಿದರು.

    ಶ್ರೀ ಮಠದ ಉತ್ತರಾಧಿಕಾರಿ ಮಲ್ಲಿಕಾರ್ಜುನ ಸ್ವಾಮೀಜಿ, ಲಿಂಗನಾಯಕನಹಳ್ಳಿಯ ಚನ್ನವೀರ ಸ್ವಾಮೀಜಿ, ಹೂವಿನಶಿಗ್ಲಿ ಚನ್ನವೀರ ಸ್ವಾಮೀಜಿ, ಕರಬಸಪ್ಪ ಹಂಚಿನಾಳ, ರಾಮಸ್ವಾಮಿ ಹೆಗ್ಗಡಾಳ, ಬಾಬಣ್ಣ ಶಿವಶೆಟ್ಟರ್, ಪವನ ಮೇಟಿ, ಡಾ.ಬಿ.ಜಿ. ಜವಳಿ, ಇತರರು ಉಪಸ್ಥಿತರಿದ್ದರು. ಶಿಕ್ಷಕರಾದ ಎಸ್.ಆರ್. ರಿತ್ತಿ ಹಾಗೂ ಎಸ್.ಎಸ್. ಇನಾಮತಿ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts