More

    ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!

    ಮೈಸೂರು: ಶನಿವಾರ ನಗರಕ್ಕೆ ಭೇಟಿ ನೀಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ, ರಾಜಕೀಯ ತುಂಬಾ ಕಷ್ಟ ಎನ್ನುತ್ತಾ ಹಲವು ವಿಚಾರಗಳ ಬಗ್ಗೆ ಮಾತನಾಡಿದರು.

    ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಕೆಲಸಕ್ಕೆ ರಾಜೀನಾಮೆ ನೀಡಿ ತನ್ನ ರಾಜ್ಯ ತಮಿಳುನಾಡಿಗೆ ಹಿಂತಿರುಗಿದ್ದರು. ಸದ್ಯ ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಅಣ್ಣಾಮಲೈ, ರಾಜಕೀಯ ತುಂಬಾ ಕಷ್ಟ. ಸಿಕ್ಕಾಪಟ್ಟೆ ಪ್ರವಾಸ ಮಾಡುತ್ತಿದ್ದೇನೆ. ತಮಿಳುನಾಡಿನಲ್ಲಿ ಮೊದಲಿನಿಂದಲೂ ದ್ರಾವಿಡ ರಾಜಕಾರಣ ಇದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ನಾಲ್ಕೈದು ದಶಕಗಳಿಂದ ವ್ಯಕ್ತಿಗತ ರಾಜಕಾರಣ ನಡೆದಿದೆ. ಎಂಜಿಆರ್, ಕರುಣಾನಿಧಿ, ಜಯಲಲಿತಾ ಹೀಗೆ ವ್ಯಕ್ತಿ ಆಧಾರಿತ ರಾಜಕಾರಣ ನಡೆದಿದೆ. ಈಗ ಅಂತಹ ಪರಿಸ್ಥಿತಿ ಇಲ್ಲ. ಅಂತಹ ನಾಯಕರೂ ಇಲ್ಲ. ರಜನಿಕಾಂತ್, ಕಮಲ್​ಹಸನ್ ಮುಂತಾದ ಚಿತ್ರನಟರು ರಾಜಕೀಯ ಪ್ರವೇಶ ಮಾಡಿದ್ದಾರೆ. ಇದರಿಂದಾಗಿ ರಾಜಕೀಯದಲ್ಲಿ ಸ್ಪೇಸ್ ಕ್ರಿಯೇಟ್ ಆಗಿದೆ. ಇದನ್ನು ಬಳಸಿಕೊಂಡು ಬಿಜೆಪಿ ಬೆಳೆಯಲಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿರಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ದೃಶ್ಯವನ್ನು ತನ್ನ ಪ್ರಿಯಕರನಿಗೆ ಕಳುಹಿಸುತ್ತಿದ್ದ ಪ್ರೇಯಸಿ! ಮುಂದೇನಾಯ್ತು?

    ತಮಿಳುನಾಡಿನಲ್ಲಿ ಹಲವು ಹಿರಿಯ ನಾಯಕರಿದ್ದಾರೆ. ಕೇಂದ್ರ ಸಚಿವರಾಗಿ ಕೆಲಸ ಮಾಡಿದವರೂ ಇದ್ದಾರೆ. ನಾನು ಸಾಮಾನ್ಯ ಕಾರ್ಯಕರ್ತ ಮಾತ್ರ. ನಮ್ಮೆಲ್ಲರ ನಾಯಕ ಪ್ರಧಾನಿ ನರೇಂದ್ರ ಮೋದಿ. ತಮಿಳುನಾಡಿನಲ್ಲಿ ವ್ಯಕ್ತಿಗತ ರಾಜಕಾರಣ ಈಗ ನಡೆಯಲ್ಲ ಎಂದು ಅಣ್ಣಾಮಲೈ ಹೇಳಿದರು.

    ಮೈಸೂರಿನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಹಿರಿಯ ವಕೀಲ ಓ.ಶಾಮಭಟ್ ಅವರ “ಬೆಂಕಿಯ ಚೆಂಡು ಕುಯಿಲಿ” ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಾಮಾಜಿಕ ನ್ಯಾಯ ವೇದಿಕೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಪುಸ್ತಕ ಬಿಡುಗಡೆ ಮಾಡಿದರು. ಇದೇ ವೇಳೆ ತಮಿಳುನಾಡಿನ ರಾಜಕೀಯ ಕುರಿತು ಮಾತನಾಡಿದರು.

    ಕಾರ್ಯಕ್ರಮದಲ್ಲಿ ಸಂಸದ ಎ.ನಾರಾಯಣ ಸ್ವಾಮಿ, ಕರ್ನಾಟಕ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಸಂತ್ ಕುಮಾರ್, ಪುಸ್ತಕದ ಕತೃ ಓ.ಶಾಮಭಟ್ ಮತ್ತಿತರರು ಉಪಸ್ಥಿತರಿದ್ದರು.

    ಚುನಾವಣೆಗೆ ಅಣ್ಣಾಮಲೈ ಸ್ಪರ್ಧಿಸಲ್ವಾ? ಅನುಮಾನ ಮೂಡಿಸಿದೆ ಈ ಹೇಳಿಕೆ

    ಪತ್ನಿ ಊರಿಗೆ ಹೋದಳೆಂದು ಸ್ನೇಹಿತೆಯನ್ನ ಮನೆಗೆ ಕರೆಸಿಕೊಂಡ ಟೆಕ್ಕಿಗೆ ಕಾದಿತ್ತು ಶಾಕ್​!

    ವಿಷ್ಣುದಾದಗೆ ಅಪಮಾನ: ದುಷ್ಕರ್ಮಿಗಳ ವಿರುದ್ಧ ಸಿಡಿದೆದ್ದ ದರ್ಶನ್​

    ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್​ ಆಸೆಗೆ ಬಲಿಯಾದ್ರೆ ಬದುಕೇ ನರಕ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts