More

    ಬಾಂಬ್​ ಸಿಡಿಸಿದ ಅಣ್ಣಾಮಲೈ! ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಪಕ್ಷಾಧ್ಯಕ್ಷ ಹುದ್ದೆಗೆ ಗುಡ್ ಬೈ!

    ತಮಿಳುನಾಡು: ಬಿಜೆಪಿ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವಿನ ಸಂಬಂಧದಲ್ಲಿ ಏರಿಳಿತ ನಡೆಯುತ್ತಿದೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಎಐಎಡಿಎಂಕೆ ಜೊತೆಗಿನ ಮೈತ್ರಿಗೆ ವಿರುದ್ಧವಾಗಿದ್ದಾರೆ ಎಂದು ಆಂತರಿಕ ಸಭೆಯಲ್ಲಿ ಹೇಳಿದ್ದಾರೆ. ಆಂತರಿಕ ಸಭೆಯಲ್ಲಿ ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ ಕೇಂದ್ರ ನಾಯಕತ್ವ ತಮಿಳುನಾಡಿನಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಲು ನಿರ್ಧರಿಸಿದರೆ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

    ಅವರ ಹೇಳಿಕೆಗಳು ಕೋಲಾಹಲವನ್ನು ಸೃಷ್ಟಿಸಿದ್ದು, ಆ ಸಭೆಯಲ್ಲಿದ್ದ ಕನಿಷ್ಠ ಇಬ್ಬರು ನಾಯಕರು ಮೈತ್ರಿಯ ಅಗತ್ಯವನ್ನು ಪ್ರಶ್ನಿಸಿದ್ದಾರೆ. ಅಂತಹ ನಿರ್ಧಾರಗಳನ್ನು ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ತೆಗೆದುಕೊಳ್ಳುತ್ತದೆ ಎನ್ನುವ ಕಡೆಗೆ ಆ ನಾಯಕರು ಪರೋಕ್ಷವಾಗಿ ಹೇಳಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್ ನಾಯಕರಿಗೆ ಖಿನ್ನತೆ: ಅಣ್ಣಾಮಲೈ

    ಬಿಜೆಪಿ ಮಹಿಳಾ ಮೋರ್ಚಾ ಮುಖ್ಯಸ್ಥೆ ಮತ್ತು ಕೊಯಮತ್ತೂರು (ದಕ್ಷಿಣ) ಶಾಸಕಿ ವನತಿ ಶ್ರೀನಿವಾಸನ್ ಮತ್ತು ಉಪಾಧ್ಯಕ್ಷ ನಾರಾಯಣನ್ ತಿರುಪತಿ, ಮೂಲಗಳ ಪ್ರಕಾರ, ಅಣ್ಣಾಮಲೈ ಅವರು ಎಐಎಡಿಎಂಕೆ ಪಕ್ಷದ ಜತೆ ಮೈತ್ರಿ ಮಾಡುವುದನ್ನು ವಿರೋಧಿಸುವುದಾಗಿ ಸಭೆಯಲ್ಲಿ ಹೇಳಿದ ನಂತರ ಸ್ಪಷ್ಟನೆ ಕೇಳಿದರು. ಆದರೆ, ಅಣ್ಣಾಮಲೈ ಅವರ ಭಾಷಣಕ್ಕೆ ಇತರ ಪದಾಧಿಕಾರಿಗಳಿಂದ ಬೆಂಬಲ ಸಿಕ್ಕಿದ್ದು, ಬಿಜೆಪಿ ಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂದು ನಂಬಿದ್ದಾರೆ ಎಂದು ತಿಳಿದುಬಂದಿದೆ.

    ತಮಿಳುನಾಡಿನಲ್ಲಿ ಮುಂಬರುವ ಚುನಾವಣೆಯಲ್ಲಿ ದ್ರಾವಿಡ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ಅಣ್ಣಾಮಲೈ ಖಡಾಖಂಡಿತವಾಗಿ ಹೇಳಿದ್ದಾರೆ ಎಂದು ಅಂತರಿಕ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡರು ಮಾಧ್ಯಮಗಳಿಗೆ ತಿಳಸಿದ್ದಾರೆ. ಬಿಜೆಪಿ ಸ್ವತಂತ್ರ ಪಕ್ಷವಾಗಿ ಹೊರಹೊಮ್ಮಬೇಕಾದರೆ ಖುದ್ದಾಗಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಅಣ್ಣಾಮಲೈ ಅವರ ಉದ್ದೇಶವಾಗಿತ್ತು ಎಂದು ಅವರು ಹೇಳಿದರು.

    ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದಾಗ ಮಾತ್ರ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಉತ್ತಮ ಆಡಳಿತದ ಬಗ್ಗೆ ನಮ್ಮ ನಿಲುವನ್ನು ಜನರು ಗಂಭೀರವಾಗಿ ಪರಿಗಣಿಸುತ್ತಾರೆ ಎಂದ ಅವರು, ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಕಷ್ಟವಾಗುತ್ತದೆ. ಮತ್ತು ಅದಕ್ಕಾಗಿ ಎಲ್ಲರೂ ಕೆಲ ವರ್ಷಗಳ ಕಾಲ ಅಸಾಧಾರಣ ನೋವನ್ನು ಅನುಭವಿಸಬೇಕಾಗುತ್ತದೆ ಎಂದು ಒಪ್ಪಿಕೊಂಡರು.” ಎಂದು ಸಭೆಯಲ್ಲಿ ಉಪಸ್ಥಿತರಿದ್ದ ನಾಯಕರೊಬ್ಬರು ತಿಳಿಸಿದರು.‘

    ಇದನ್ನೂ ಓದಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು!

    ಕೇಂದ್ರ ನಾಯಕತ್ವವು ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದರೆ ರಾಜ್ಯ ಮುಖ್ಯಸ್ಥ ಸ್ಥಾನವನ್ನು ತ್ಯಜಿಸಿ ಪಕ್ಷಕ್ಕಾಗಿ ‘ಸಾಮಾನ್ಯ ಕೇಡರ್” ಆಗಿ ಕೆಲಸ ಮಾಡುವುದಾಗಿ ಅಣ್ಣಾಮಲೈ ಸಭೆಯಲ್ಲಿ ಹೇಳಿದರು ಎಂದು ಮತ್ತೊಬ್ಬ ನಾಯಕ ಹೇಳಿದರು. ಮಾಜಿ ಐಪಿಎಸ್ ಅಧಿಕಾರಿ ತಾನು ರಾಜಕೀಯಕ್ಕೆ ಬಂದಿದ್ದೇನೆ. ತಮಿಳುನಾಡಿನಲ್ಲಿ ಬದಲಾವಣೆಯನ್ನು ತರಲು ನಾಯಕತ್ವದ ಪಾತ್ರವನ್ನು ವಹಿಸಿದ್ದೇನೆ. ಎಐಎಡಿಎಂಕೆಗೆ “ಎರಡನೇ ಪಿಟೀಲು” ನುಡಿಸಲು ಅಲ್ಲ ಎಂದು ನಾಯಕ ಹೇಳಿದರು.

    ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅಪಾಯಿಂಟ್‌ಮೆಂಟ್‌ ಕೇಳಿರುವುದಾಗಿ ಅಣ್ಣಾಮಲೈ ಅವರು ಸಭೆಯಲ್ಲಿ ಹೇಳಿದ್ದಾರೆಂದು ನಂಬಲಾಗಿದೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts