26.8 C
Bangalore
Friday, December 13, 2019

ರೇವಣಸಿದ್ಧೇಶ್ವರ ಸೊಸೈಟಿ ರಜತ ಮಹೋತ್ಸವ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಹೊರ್ತಿ: 1994 ರಲ್ಲಿ ಕೇವಲ 300 ಸದಸ್ಯರಿಂದ ಪ್ರಾರಂಭವಾದ ರೇವಣಸಿದ್ಧೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಸದ್ಯ 25ನೇ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಸ್ತುತ 5 ಉಪ ಶಾಖೆಗಳ ಮೂಲಕ ವ್ಯಾಪಾರಿಗಳು ಹಾಗೂ ಬಡವರ ಸ್ನೇಹಿಯಾಗಿ ಸಹಕಾರ ರಂಗದಲ್ಲಿ ಮಹೋನ್ನತ ಸಾಧನೆ ಮಾಡಿದೆ ಎಂದು ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಸಾಹುಕಾರ ಖೈನೂರ ಹೇಳಿದರು.
ನಿಗದಿತ ಸಮಯದಲ್ಲಿ ಸಾಲದ ಕಂತು ತುಂಬಿ ಸಂಘ ಉತ್ತುಂಗಕ್ಕೆ ಬೆಳೆಯುವಲ್ಲಿ ಸಾಲಗಾರರ ಪಾತ್ರ ಹಿರಿದಾಗಿದೆ. ಈ ಸಂಘದ ರಜತ ಮಹೋತ್ಸವ ಸೆ.22 ರಂದು ಗ್ರಾಮದ ರೇವಣಸಿದ್ಧೇಶ್ವರ ಹಳೆಯ ದೇವಾಲಯ ಆವರಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಇದೇ ವೇಳೆ ಜಿಲ್ಲಾ ಕೆಎಂಎಫ್ ಅಧ್ಯಕ್ಷ ಸಂಭಾಜಿರಾವ ಮಿಸಾಳೆ ಅವರನ್ನು ಸನ್ಮಾನಿಸಲಾಗುವುದು. ರಜತ ಮಹೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಈ ಬೃಹತ್ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ವಿನಂತಿಸಿದರು.
ಕಾತ್ರಾಳ ಜ್ಞಾನ ಯೋಗಾಶ್ರಮದ ಅಮೃತಾನಂದ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ಎಂ.ಬಿ. ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಧ್ವಜಾರೋಹಣ ಮಾಡುವರು. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ನೂತನ ಕಟ್ಟಡ ಉದ್ಘಾಟಿಸುವರು. ಜಿಪಂ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ನೆನಪಿನ ಕಾಣಿಕೆ ಬಿಡುಗಡೆ ಮಾಡಲಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್. ನಡಹಳ್ಳಿ ಹಾಗೂ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸೇರಿ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಅಣ್ಣಪ್ಪ ಸಾಹುಕಾರ ಖೈನೂರ ತಿಳಿಸಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....