More

  ತೆಂಕನಿಡಿಯೂರು ಸರ್ಕಾರಿ ಕಾಲೇಜು ರಾಜ್ಯಕ್ಕೆ ಮಾದರಿ

  ಶಾಸಕ ಯಶ್​ಪಾಲ್​ ಸುವರ್ಣ ಮೆಚ್ಚುಗೆ | ವಾರ್ಷಿಕೋತ್ಸವ ಉದ್ಘಾಟನೆ

  ವಿಜಯವಾಣಿ ಸುದ್ದಿಜಾಲ ಉಡುಪಿ
  ಕಳೆದ ಸಾಲಿನ ಸುಶಾಸನ ದಿನದ ಪ್ರಯುಕ್ತ ಶಿಕ್ಷಣ ಇಲಾಖೆಯು ಉಡುಪಿ ತಾಲೂಕಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಅತ್ಯುತ್ತಮ ಫಲಿತಾಂಶ ಗಳಿಸಿದ ಕಾಲೇಜು ಎಂದು ಘೋಷಿಸಿದೆ. ಇದು ನನ್ನ ವಿಧಾನಸಭಾ ಕ್ಷೇತ್ರದಲ್ಲಿದೆ ಎನ್ನುವುದು ನನಗೂ ಹೆಮ್ಮೆ ತಂದಿದೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

  ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿ, 2006ರಿಂದ ಇಂದಿನವರೆಗೆ 52 ರ್ಯಾಂಕ್​ ಗಳಿಸಿದ ಕಾಲೇಜಿನ ಸಾಧನೆ ನಿಜಕ್ಕೂ ಅಭಿನಂದನೀಯ. ಈ ಕಾಲೇಜು ರಾಜ್ಯಕ್ಕೇ ಮಾದರಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಕಾಲೇಜಿನ ಎಲ್ಲ ಬೋಧಕ ವರ್ಗದವರನ್ನು ಅಭಿನಂದಿಸುತ್ತೇನೆ ಎಂದರು.

  ನಿವೃತ್ತರಿಗೆ ಗೌರವ

  ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್​ ರೈ ಕೆ., ಕಾಲೇಜಿನ ಬಗ್ಗೆ ಪಕ್ಷಿನೋಟ ತೆರೆದಿಟ್ಟದರು. 2023-24ನೇ ಸಾಲಿನಲ್ಲಿ ನಿವೃತ್ತರಾದ ಸಿಬ್ಬಂದಿ ಶೇಖ್​ ಸಾಬ್ಜಾನ್​ ಸಾಹೇಬ್​, ಜಾನಿ ಕೆ.ಎಂ., ವರ್ಗಾವಣೆಗೊಂಡ ಅಬ್ರಾಹಂ ಚಾಕೋ ಹಾಗೂ ನೆಟ್​ ಮತ್ತು ಸ್ಲೆಟ್​ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

  ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್​ ಕ್ಲಬ್​ ಉಡುಪಿ ಅಮೃತ್​ನ ಅಧ್ಯಕ್ಷೆ ಭಾರತಿ ಎಚ್​.ಎಸ್​., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಜಾತಾ ಆಚಾರ್ಯ, ಉಡುಪಿಯ ಸಾಫಲ್ಯ ಟ್ರಸ್ಟ್​ನ ನಿರುಪಮಾ ಶೆಟ್ಟಿ, ಶೈಕ್ಷಣಿಕ ಸಲಹೆಗಾರ ಡಾ. ಪ್ರಸಾದ್​ ರಾವ್​ ಎಂ., ವಿದ್ಯಾಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕರಾದ ರಾಧಾಕೃಷ್ಣ, ಡಾ. ರಾಘವ ನಾಯ್ಕ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಕೃಷ್ಣ ಸಾಸ್ತಾನ, ರತ್ನಮಾಲಾ, ಐಕ್ಯುಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಆಂಗ್ಲಭಾಷಾ ಸಹ ಪ್ರಾಧ್ಯಾಪಕ ನಿತ್ಯಾನಂದ ವಿ. ಗಾಂವ್ಕರ್​ ಉಪಸ್ಥಿತರಿದ್ದರು.

  See also  ವಿಎಂ ಶಿಕ್ಷಣ ಸಂಸ್ಥೆಯಿಂದ ಒತ್ತುವರಿ

  ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್​ಕುಮಾರ್​ ಶೆಟ್ಟಿ ಹಾಗೂ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್​ ನೀಲಾವರ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ನಿಶಾ ವಂದಿಸಿದರು.

  ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

  ಎಂಎ ಇತಿಹಾಸ ವಿಭಾಗದಲ್ಲಿ ಪ್ರಥಮ ರ್ಯಾಂಕ್​ ಗಳಿಸಿದ ದಯೇಶ್​, ಎಂಎ ಸಮಾಜಶಾಸ್ತ್ರದಲ್ಲಿ ಪ್ರಥಮ ರ್ಯಾಂಕ್​ ಗಳಿಸಿದ ನಾಗರತ್ನಾ, ಬಿಎಸ್​ಡಬ್ಲೂನಲ್ಲಿ ಪ್ರಥಮ ರ್ಯಾಂಕ್​ ಗಳಿಸಿದ ಅನ್ವಿತಾ ಜಿ.ವಿ., ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಸುರೇಶ್​, ಧನುಷ್​ ಪ್ರಥಮ ಬಿ.ಕಾಂ., ಪೂಜಾ ತೃತೀಯ ಬಿಎ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು. ಅವರಿಗೆ ತಲಾ 2 ಸಾವಿರ ರೂ. ನೀಡಿ ಪ್ರೋತ್ಸಾಹಿಸಿದರು.

  ವಿದ್ಯಾರ್ಥಿಗಳು ಎಷ್ಟು ಬುದ್ಧಿವಂತರಿದ್ದಾರೆ, ಎಷ್ಟು ಚೆನ್ನಾಗಿದ್ದಾರೆ ಅಥವಾ ಎಷ್ಟು ಸಂಪರ್ಕ ಹೊಂದಿದ್ದಾರೆ ಎನ್ನುವುದು ಲೆಕ್ಕಕ್ಕೆ ಬರುವುದಿಲ್ಲ. ಸತತ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮಾತ್ರ ಸಾಧಕರಾಗಲು ಸಾಧ್ಯ. ನಮ್ಮ ಜೀವನ ಪಠ್ಯಕ್ರಮ ಇಲ್ಲದ, ಪ್ರಶ್ನೆ ಪತ್ರಿಕೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯೂ ಇಲ್ಲದ ಒಂದು ಪರೀಕ್ಷೆಯಾಗಿದೆ.

  ಜಯಕರ ಶೆಟ್ಟಿ ಇಂದ್ರಾಳಿ. ಅಧ್ಯಕ್ಷ, ಜಿಲ್ಲಾ ಸಹಕಾರ ಯೂನಿಯನ್​

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts