ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ತಾಲೂಕು ಮಹಿಳಾ ಜ್ಞಾನವಿಕಾಸ ಕೇಂದ್ರದ ಕಾರ್ಯಕ್ರಮದ ಅಡಿಯಲ್ಲಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಲ್ಲಿಪಾದೆ ಸಹಭಾಗಿತ್ವದಲ್ಲಿ, ಜ್ಞಾನವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮ, ಅಲ್ಲಿಪಾದೆಯಲ್ಲಿ ಜರುಗಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ವಲಯಾಧ್ಯಕ್ಷ ಮನ್ಮಥ ರಾಜ್ ಜೈನ್ ಉದ್ಘಾಟಿಸಿ, ಮಹಿಳೆಯರಿಗೆ ಜ್ಞಾನ ವಿಕಾಸ ಕೇಂದ್ರಗಳು ಪ್ರತಿಭೆ ವ್ಯಕ್ತಪಡಿಸಲು ಉತ್ತಮ ವೇದಿಕೆಯಾಗಿದೆ ಎಂದರು.
ಒಕ್ಕೂಟದ ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿದರು. ಸರಪಾಡಿ ಗ್ರಾ.ಪಂ ಅಧ್ಯಕ್ಷೆ ಲೀಲಾವತಿ, ವಲಯ ಅಧ್ಯಕ್ಷ ಮನೋಹರ್, ಶ್ರೀರಾಮ ಭಜನಾ ಮಂಡಳಿಯ ಕಾರ್ಯದರ್ಶಿ ಭವಾನಿ ಶಂಕರ್ ರಾವ್, ಯೋಜನಾಧಿಕಾರಿ ಬಾಲಕೃಷ್ಣ ಉಪಸ್ಥಿತರಿದ್ದರು.
ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರುತಿ ಸ್ವಾಗತಿಸಿದರು. ಸೇವಾಪ್ರತಿನಿಧಿ ವಸಂತಿ ವಂದಿಸಿದರು. ವಲಯ ಮೇಲ್ವಿಚಾರಕಿ ರೂಪ ರೈ ಕಾರ್ಯಕ್ರಮ ನಿರೂಪಿಸಿದರು.