More

    ಶ್ರದ್ಧೆ, ಕಠಿಣ ಪರಿಶ್ರಮದಿಂದ ಗುರಿ ಸಾಧನೆ ಸಾಧ್ಯ

    ವಿದ್ಯಾಧೀಶ ತೀರ್ಥ ಶ್ರೀಪಾದರ ಅಭಿಪ್ರಾಯ | ವಾರ್ಷಿಕೋತ್ಸವ ಉದ್ಘಾಟನೆ

    ವಿಜಯವಾಣಿ ಸುದ್ದಿಜಾಲ ಉಡುಪಿ
    ಇದು ವಿಜ್ಞಾನ ಯುಗವಾಗಿದ್ದರಿಂದ ಇಲೆಕ್ಟ್ರಿಕಲ್​, ಇಲೆಕ್ಟ್ರಾನಿಕ್ಸ್​, ಕಂಪ್ಯೂಟರ್​ ಉಪಕರಣಗಳ ಬಳಕೆ ಹೆಚ್ಚಾಗಿದೆ. ಹೀಗಾಗಿ ಇಂತಹ ವಿದ್ಯೆಗೂ ಸಹ ಬೇಡಿಕೆ ಹೆಚ್ಚುತ್ತಲೇ ಇದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದಾದರೂ ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಬೇಕಾಗುತ್ತದೆ ಎಂದು ಉಡುಪಿ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

    ಪಲಿಮಾರು ಮಠದ ಯೋಗದೀಪಿಕಾ ಟ್ರಸ್ಟ್​ ವತಿಯಿಂದ ಹಾಗೂ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಶ್ರೀಕೃಷ್ಣ ಟೆಕ್ನಿಕಲ್​ ಎಜುಕೇಶನ್​ ಸೆಂಟರ್​ನಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಮತ್ತು ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.

    ಭವಿಷ್ಯ ರೂಪಿಸಿಕೊಳ್ಳಬಹುದು

    ನಮ್ಮ ಸಂಸ್ಥೆಯಲ್ಲಿ ಕಲಿಯುವಂತಹ ವಿದ್ಯಾರ್ಥಿಗಳಿಗೆ ಸ್ವಂತ ಉದ್ಯೋಗ ಅಥವಾ ಬೇರೆ ಸಂಸ್ಥೆಗಳಲ್ಲಿ ಕೆಲಸ ಮಾಡುವುದಾದರೂ ತರಬೇತಿ ನೀಡುತ್ತೇವೆ. ಹೀಗಾಗಿ ಈ ತನಕ ವಿದ್ಯಾರ್ಜನೆ ಮಾಡಿದ ಎಲ್ಲ ಮಕ್ಕಳೂ ಉದ್ಯೋಗಸ್ಥರಾಗಿದ್ದರೆ. ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.

    ಪಲಿಮಾರು ಮಠದ ಬಲರಾಮ ಭಟ್​ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲ ಸುಧೀಂದ್ರ ಯು.ಬಿ. ಪ್ರಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ರವೀಂದ್ರ ಸ್ವಾಗತಿಸಿದರು. ನಿತಿನ್​ ಸೇರಿಗಾರ್​ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts