ಕಟ್ಟಡ ಕಾರ್ಮಿಕ ಸಂಘದ ವಾರ್ಷಿಕೋತ್ಸವ

blank

ಸಾಗರ: ಶ್ರಮಜೀವಿ ಕಟ್ಟಡ ಕಾರ್ಮಿಕ ಸಂಘದ ನಾಲ್ಕನೇ ವಾರ್ಷಿಕೋತ್ಸವ ಡಿ.22ರಂದು ಬೆಳಗ್ಗೆ 10ಕ್ಕೆ ಸಾಗರ ತಾಲೂಕಿನ ಮಾಸೂರಿನ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಾರ್ಷಿಕೋತ್ಸವ ಅಂಗವಾಗಿ ಪದಾಧಿಕಾರಿಗಳ ಪದಗ್ರಹಣ, ಕಾರ್ಮಿಕರಿಗೆ ಕ್ಯಾಲೆಂಡರ್ ಮತ್ತು ಟಿ-ಶರ್ಟ್ ವಿತರಿಸಲಾಗುವುದು. ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಿಂದ ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘ ಶ್ರಮಿಸುತ್ತಿದೆ. ನಮ್ಮ ಸಂಘಟನೆಯಲ್ಲಿ ಸುಮಾರು 500 ನೋಂದಾಯಿತ ಕಾರ್ಮಿಕರಿದ್ದು ಅಸಂಘಟಿತ ವಲಯಕ್ಕೆ ಸೇರಿದವರಾಗಿದ್ದಾರೆ. ಅವರಿಗೆ ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳಾದ ಸತೀಶ್ ಅಂಗಡಿ, ರಾಮಚಂದ್ರ ಮೇಸ್ತ್ರಿ, ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.
ಸಂಘದಲ್ಲಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸೇರಿ ಒಟ್ಟು 36 ಪದಾಧಿಕಾರಿಗಳನ್ನು ಹೊಸದಾಗಿ ಆಯ್ಕೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಯಾವುದೇ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ. ಕಾಲಕಾಲಕ್ಕೆ ಕಾರ್ಮಿಕರ ಪರವಾಗಿ ಕಾಯ್ದೆಗಳು ಬರುತ್ತಿದ್ದರೂ ಅದು ತಾಲೂಕು ಕೇಂದ್ರಗಳಿಗೆ ತಲುಪುತ್ತಿಲ್ಲ. ಹಾಗಾಗಿ ಶ್ರಮಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಮುಂದಿನ ದಿನಗಳಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಿದೆ ಎಂದರು. ಶಂಕರಪ್ಪ, ಗಣಪತಿ, ಅಣ್ಣಪ್ಪ ಕೆಳದಿ ಸುದ್ದಿಗೋಷ್ಠಿಯಲ್ಲಿದ್ದರು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…