ಪ್ರತಿಭೆ ಪ್ರದರ್ಶಿಸಲು ವೇದಿಕೆ ಮುಖ್ಯ: ಕಾವ್ಯ ಭಟ್ ಅನಿಸಿಕೆ

New Project
Published on

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೇವಾಂಜಲಿ ಸಂಗೀತ ತರಗತಿಯ ವಾರ್ಷಿಕೋತ್ಸವ ಭಾನುವಾರ ನಡೆಯಿತು.

ಶಿವಾಂಜಲಿ ಕಲಾ ಕೇಂದ್ರ ಪೇರ್ಲದ ನಿರ್ದೇಶಕಿ ವಿದುಷಿ ಕಾವ್ಯ ಭಟ್ ಉದ್ಘಾಟಿಸಿ ಮಾತನಾಡಿ, ಸಂಗೀತ ಕಲಿಯುವ ವಿದ್ಯಾರ್ಥಿಗಳಿಗೆ ಪ್ರತಿಭೆ ಪ್ರದರ್ಶಿಸಲು ವೇದಿಕೆ ಸಿಗದೆ ಹೋದಾಗ ಅವರಲ್ಲಿ ಕಲಿಯುವ ಆಸಕ್ತಿ ಕಡಿಮೆಯಾಗುತ್ತದೆ. ಆಸಕ್ತಿ ನಿರಂತರವಾಗಿರಬೇಕಾದರೆ ಅವಕಾಶ ಮುಖ್ಯ ಎಂದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿದರು. ಗಾಯಕಿ ಪವಿತ್ರ ವಿನಯ ಮಯ್ಯ ತುಪ್ಪೆಕಲ್ಲು, ಸಂಗೀತ ವಿದ್ವಾನ್ ಕೃಷ್ಣಾಚಾರ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ದೇವರ ನಾಮ, ವಿದ್ವಾನ್ ಕೃಷ್ಣಾಚಾರ್ಯ ಅವರಿಂದ ಶಾಸ್ತ್ರೀಯ ಸಂಗೀತ ಮತ್ತು ಭಕ್ತಿಗೀತೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net