More

  ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

  ಶನಿವಾರಸಂತೆ: ಶಿಕ್ಷಣವೊಂದಿದ್ದರೆ ಏನನ್ನಾದರೂ ಸಾಧಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಕೊಡ್ಲಿಪೇಟೆಯ ಕ್ಯಾತಿಯಲ್ಲಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಆಂಗ್ಲ ಮಾಧ್ಯಮ ವಸತಿ ಶಾಲೆಯ ಉಪನ್ಯಾಸಕ ಡಿ.ಪಿ.ಸತೀಶ್ ಹೇಳಿದರು.

  ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ 2023-24ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣದಲ್ಲಿ ತಲ್ಲೀನರಾಗುತ್ತಿದ್ದು, ವಿದ್ಯಾಭ್ಯಾಸದತ್ತ ಗಮನಹರಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ ಎಂದರು.

  ವಿದ್ಯಾಭ್ಯಾಸದ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನ ಬಗ್ಗೆ ಶ್ರದ್ಧೆ ಮತ್ತು ಏಕಾಗ್ರತೆ ಬೆಳೆಸಿಕೊಳ್ಳಬೇಕು. ಅಗತ್ಯಕ್ಕಾಗಿ ಮಾತ್ರ ಮೊಬೈಲ್ ಬಳಕೆ ಮಾಡಬೇಕು. ಸಾಮಾಜಿಕ ಜಾಲತಾಣದಿಂದ ದೂರ ಇರುವುದರ ಜತೆಗೆ ದುಶ್ಚಟಗಳಿಂದಲೂ ದೂರ ಇದ್ದು ಶಿಕ್ಷಣವನ್ನು ಗುರಿಯನ್ನಾಗಿಸಿಕೊಳ್ಳಬೇಕು. ಇದರಿಂದ ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮುವ ಮೂಲಕ ಸಮಾಜಕ್ಕೆ ಮಾದರಿಯಾಗಬಹುದು ಎಂದರು.

  ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಆದ್ಯತೆ ನೀಡುವುದರ ಜತೆಗೆ ವ್ಯಕ್ತಿತ್ವ ವಿಕಸನದತ್ತ ಗಮನಹರಿಸಬೇಕು. ಆಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದರು.

  ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ಈ ದಿಸೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಓದಿನ ಕಡೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.

  ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರಂಜನ್ ಮಾತನಾಡಿದರು. ವಿದ್ಯಾಸಂಸ್ಥೆ ಉಪಾಧ್ಯಕ್ಷ ಶಂಭುಲಿಂಗಪ್ಪ, ನಿರ್ದೇಶಕರಾದ ಯತೀಶ್, ಶಿವಪ್ರಸಾದ್, ಆಡಳಿತಾಧಿಕಾರಿ ಜಗದೀಶ್ ಬಾಬು, ಪ.ಪೂ.ಕಾಲೇಜು ಪ್ರಾಂಶುಪಾಲ ಪವಾರ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಅಬ್ದುಲ್ ರಬ್ ಇತರರಿದ್ದರು.

  See also  ಕಟ್ಟೆಹಾಡಿಯಲ್ಲಿ ಅಭಿವೃದ್ಧಿ ಪರ್ವ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts