More

    ವಿಶೇಷ ಆರ್ಥಿಕ ಪ್ಯಾಕೇಜ್ ಘೊಷಿಸಿ

    ಹಾವೇರಿ: ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆಗೊಳಗಾದ ಸಂತ್ತಸ್ತರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೊಷಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

    ನೇತೃತ್ವ ವಹಿಸಿದ್ದ ಜಗದೀಶ ಕೆರೂಡಿ ಮಾತನಾಡಿ, 1522 ಬಡ ಮಹಿಳೆಯರ ಗರ್ಭಕೋಶವನ್ನು ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ವೈದ್ಯಾಧಿಕಾರಿ ಡಾ. ಪಿ. ಶಾಂತ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಕಳೆದ ಏಪ್ರಿಲ್ ತಿಂಗಳಲ್ಲಿ ರಾಣೆಬೆನ್ನೂರಿನಿಂದ ಶಿಗ್ಗಾಂವಿಯ ಸಿಎಂ ಮನೆವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ ಪರಿಹಾರ ಕೊಡಿಸುವ ಭರವಸೆ ನೀಡಿತ್ತು. ಆದರೆ, ಈವರೆಗೂ ಪರಿಹಾರ ಸಿಕ್ಕಿಲ್ಲ. ಆದ್ದರಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದೇವೆ. ಆದರೆ, ನೆಲೋಗಲ್ಲ ಬಳಿಯಿಂದ ಪಾದಯಾತ್ರೆ ಆರಂಭಿಸಲು ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ ಜಿಲ್ಲಾಡಳಿತ ಭವನದ ಎದುರು ಧರಣಿ ಮಾಡುತ್ತಿದ್ದೇವೆ ಎಂದರು.

    ಪ್ರತಿಭಟನಾಕಾರರೊಂದಿಗೆ ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲರ್ದತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ ಸಭೆ ನಡೆಸಿದರು.

    ವಿಶೇಷ ಆರ್ಥಿಕ ಪ್ಯಾಕೇಜ್ ಘೊಷಣೆಯ ದಿನಾಂಕ ನಿಗದಿಪಡಿಸುವಂತೆ ಮಹಿಳೆಯರು ಪಟ್ಟು ಹಿಡಿದರು. ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿ ಸಹಾಯಧನ ಕೊಡಿಸಲು ಅಧಿಕಾರಿಗಳು ಒಂದು ವಾರ ಕಾಲಾವಕಾಶ ಕೋರಿದರು. ಅಧಿಕಾರಿಗಳ ಮನವಿಗೆ ಒಪ್ಪದ ಮಹಿಳೆಯರು ಮತ್ತೆ ಧರಣಿ ಆರಂಭಿಸಿದರು. ಆರ್ಥಿಕ ಪ್ಯಾಕೇಜ್ ಘೊಷಣೆ ಆಗುವವರೆಗೂ ಧರಣಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟುಹಿಡಿದರು.

    ಪ್ರಮುಖರಾದ ಲಕ್ಷ್ಮವ್ವ ಲಮಾಣಿ, ಲಲಿತವ್ವ ಲಮಾಣಿ, ಗಂಗವ್ವ ಲಮಾಣಿ, ಕೆ.ಆರ್. ಉಮೇಶ, ಜಗದೀಶ ಕೆರೋಡಿ, ಈರವ್ವ ಲಮಾಣಿ, ಹೊನ್ನವ್ವ ಲಮಾಣಿ, ಗೋವಿಂದ ಲಮಾಣಿ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts