ಸಂಘಟನೆಗೆ ಸಮುದಾಯದ ಬೆಂಬಲ ಅಗತ್ಯ

malekudi
ಜಿಲ್ಲಾ ಮಲೆಕುಡಿಯ ಸಂಘ ಉಡುಪಿ 12ನೇ ವರ್ಷದ ವಾರ್ಷಿಕ ಸಮ್ಮೇಳನದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು
Published on

ಕಾರ್ಕಳ: ಸಮುದಾಯದ ಆಶೋತ್ತರಗಳನ್ನು ಈಡೇರಿಸುವಂತೆ ತಾಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರಕ್ಕೆ ನಿರಂತರ ಹಕ್ಕೋತ್ತಾಯ ಮಂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಂಘಟನೆಗೆ ಸಮುದಾಯದ ಬೆಂಬಲ ಅಗತ್ಯ ಎಂದು ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಹೇಳಿದರು.
ಮಾಳ ಪೇರಡ್ಕದಲ್ಲಿರುವ ಮಲೆಕುಡಿಯ ಸಮುದಾಯ ಭವನದಲ್ಲಿ ಇತ್ತಿಚೇಗೆ ಜಿಲ್ಲಾ ಮಲೆಕುಡಿಯ ಸಂಘ ಉಡುಪಿ 12ನೇ ವರ್ಷದ ವಾರ್ಷಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು, ರಾಜ್ಯ ಸಂಘಟನಾ ಕಾರ್ಯದರ್ಶಿ ನೋಣಯ್ಯ ಗೌಡ ರೆಂಜಾಳ, ಪೂರ್ವ ಜಿಲ್ಲಾಧ್ಯಕ್ಷ ಸುಧಾಕರ ಗೌಡ ನಾಡ್ಪಾಲು, ಜಿಲ್ಲಾ ಸಂಘದ ವಕ್ತಾರ ದಿನೇಶ್ ಗೌಡ ನೂರಾಳ್ ಬೆಟ್ಟು, ವಕ್ತಾರೆ ಸುಜತಾ ಕಬ್ಬಿನಾಲೆ ಮೊದಲಾದವರು ಉಪಸ್ಥಿತರಿದ್ದರು. ಶ್ರಾವ್ಯ ಪ್ರಾರ್ಥಿಸಿ, ಕೋಶಾಧಿಕಾರಿ ಸುಂದರಿ ಪೇರಡ್ಕ ಸ್ವಾಗತಿಸಿ, ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಅಶೋಕ ಕೆರ್ವಾಶೆ ವಾರ್ಷಿಕ ಆಡಳಿತ ವರದಿ ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು. ಸೌಮ್ಯಾ ಅಭಿನಂದನಾ ಪತ್ರ ವಾಚಿಸಿ, ಉಪಾಧ್ಯಕ್ಷೆ ಶೋಭ ವಂದಿಸಿದರು.

ಅಭಿನಂದನೆ, ಭಜನಾ ಕುಣಿತ

2023ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಸುಜಯ್ ಪೇರಡ್ಕ ಹಾಗೂ ಪೂಜಾ ರೆಂಜಾಳ, 2024ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸುಚಿತ್ರಾ ಹೆರ್ಮುಂಡೆ ಹಾಗೂ ಪ್ರಸಾದ್ ಮುದ್ರಾಡಿ ಅವರನ್ನು ಅಭಿನಂದಿಸಲಾಯಿತು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, 2023-24ನೇ ಸಾಲಿನ ವಾರ್ಷಿಕ ಮಹಾಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶ್ರೀ ವಿದ್ಯಾ ಮಹಾಗಣಪತಿ ಮಹಿಳಾ ಭಜನಾ ಮಂಡಳಿ ಪೇರಡ್ಕ ಇವರ ಕುಣಿತ ಭಜನೆ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net