

ಬೆಳ್ತಂಗಡಿ: ಕಲೆ, ಸಾಂಸ್ಕೃತಿಕ ಅಭಿರುಚಿಯನ್ನು ರೂಢಿಸಿಕೊಳ್ಳುವುದರಿಂದ ಜನಮನ್ನಣೆಯನ್ನು ಪಡೆಯುವುದರೊಂದಿಗೆ ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಯೂಟ್ಯೂಬ್ ಕಂಟೆಂಟ್ ಕ್ರಿಯೇಟರ್ ಹೇಳಿದರು.
ವಾಣಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ವಾಣಿ ಶಿಕ್ಷಣ ಸಂಸ್ಥೆ ನಿರ್ದೇಶಕ ಗೋಪಾಲಕೃಷ್ಣ ಗುಲ್ಲೋಡಿ ಸ್ನಾಕ್ಸ್ ಟ್ರೀಟ್ ಸ್ಪರ್ಧೆ ಉದ್ಘಾಟಿಸಿದರು. ಪ್ರಾಂಶುಪಾಲ ವಿಶ್ವ ಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಮೊದಲಾದವರಿದ್ದರು. ಉಪನ್ಯಾಸಕಿ ಮೀನಾಕ್ಷಿ ಸ್ವಾಗತಿಸಿದರು. ನಮಿತಾಶ್ರೀ ನಿರೂಪಿಸಿದರು. ಹೇಮಲತಾ ವಂದಿಸಿದರು.