ಕೆರೆಕಟ್ಟೆ ಸಂತ ಅಂತೋನಿ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಹಬ್ಬ

gan (1)
Published on

ಕುಂದಾಪುರ: ಕುಂದಾಪುರ ವಲಯದ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿ ಪುಣ್ಯ ಕ್ಷೇತ್ರದ ವಾರ್ಷಿಕ ಮಹಾಹಬ್ಬವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ನೇತೃತ್ವದಲ್ಲಿ ದಿವ್ಯ ಬಲಿದಾನ ಅರ್ಪಿಸುವ ಮೂಲಕ ಆಚರಿಸಲಾಯಿತು.

ಧರ್ಮಗುರು ವಿರೇಶ್ ವಿಕ್ಟರ್ ಮೊರಾಸ್ ಮತ್ತು ನೂತನವಾಗಿ ಆಯ್ಕೆಯಾದ ಕುಂದಾಪುರ ವಲಯದ ಪ್ರಧಾನ, ಭಾಗ್ಯವಂತೆ ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಪಾವ್ಲ್ ರೇಗೊ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ, ಅಹಮದಾಬಾದ್ ವಿಮಾನ ದುರಂತಲ್ಲಿ ಮಡಿದವರಿಗೆ ಶಾಂತಿ ಮತ್ತು ಅವರ ಕುಟುಂಬದವರಿಗೆ ಸಾಂತ್ವನ ಕೋರಿ ಪ್ರಾರ್ಥನೆ ಸಲ್ಲಿಸಲಾಯಿತು.

ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜರೋರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಉಡುಪಿ ಧರ್ಮಪ್ರಾಂತ್ಯದ ನೂತನ ಚಾನ್ಸಲರ್ ಸ್ಟೀವನ್ ಡಿಸೋಜ, ಕುಂದಾಪುರ ವಲಯದ ಎಲ್ಲ ಧರ್ಮ ಕೇಂದ್ರದ ಧರ್ಮಗುರುಗಳು, ಅತಿಥಿ ಧರ್ಮ ಗುರುಗಳು ಬಲಿದಾನದಲ್ಲಿ ಭಾಗಿಯಾದರು. ಕೆರೆಕಟ್ಟೆ ಸಂತ ಅಂತೋನಿ ಪುಣ್ಯ ಕ್ಷೇತ್ರದ ರೆಕ್ಟರ್ ಸುನೀಲ್ ವೇಗಸ್ ವಂದನೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net