ಜಾತ್ರೋತ್ಸವದ ಸಡಗರದಲ್ಲಿ ಕುಕ್ಕೆ

Sub_Kukke Jathre
Published on

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಯಶಸ್ವಿಗೆ ಎಲ್ಲ ಸಿದ್ಧತೆಗಳು ನಡೆದಿವೆ.

ವಾಹನ ಪಾರ್ಕಿಂಗ್​, ಭದ್ರತೆ, ಭಕ್ತರ ಪ್ರಯಾಣಕ್ಕೆ ಸಿದ್ಧತೆಗಳು ನಡೆದಿವೆ. ೇತ್ರದಲ್ಲಿ ಬೀದಿ ಉರುಳು ಸೇವೆ, ಎಡೆಸ್ನಾನ ಸೇವೆಗಳು ನಡೆಯುತ್ತಿದ್ದು, ಸೇವೆ ನಡೆಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕುಡಿಯುವ ನೀರು, ಶೌಚಗೃಹ, ವಿದ್ಯುದ್ದೀಪ, ದೀಪಾಲಂಕಾರ, ವಿಶೇಷ ಮಾಹಿತಿ ಕೇಂದ್ರ, ವಿಶೇಷ ಆರೋಗ್ಯ ಉಪಕೇಂದ್ರವನ್ನು ವ್ಯವಸ್ಥೆಗೊಳಿಸಲಾಗಿದೆ. ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಭಕ್ತರಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ೇತ್ರದ ಅಲ್ಲಲ್ಲಿ ಜಾಗೃತಿ ಫಲಕ ಅಳವಡಿಸಲಾಗಿದೆ.

ಜಾತ್ರೆ ವೇಳೆ ಸಂತೆ ವ್ಯಾಪಾರ ಅಂಗಡಿಗಳು ತೆರೆದುಕೊಂಡಿವೆ. ಮನೋರಂಜನಾ ಸಾಧನಗಳು ಆಗಮಿಸಿದ್ದು ಜಾತ್ರೋತ್ಸವಕ್ಕೆ ಕಳೆ ನೀಡುತ್ತಲಿವೆ. ಭದ್ರತಾ ದೃಷ್ಟಿಯಿಂದ ಹೆಚ್ಚುವರಿ ಪೊಲೀಸರನ್ನು ಹಾಗೂ ಗೃಹರಕ್ಷಕ ದಳವನ್ನು ನಿಯೋಜನೆ ಮಾಡಲಾಗಿದೆ. ಭೋಜನ ಪ್ರಸಾದ ವಿತರಣೆಗೆ, ಲಗೇಜ್​ ಕೊಠಡಿಗೆ, ಗೋಪುರದ ಬಳಿ ಒತ್ತಡ ನಿವಾರಣೆಗೆ, ಮಾಹಿತಿ ಒದಗಿಸಲು, ಬಲಿವಾಡು ಸೇವೆ ಸ್ವೀಕರಿಸಲು ಸ್ವಯಂಸೇವಕರನ್ನು ನಿಯೋಜನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net